“ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”
ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.
ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು.
ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು.
ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು.
ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.
ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು.
ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು.
ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.
ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು.