1
|
ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು. |
2
|
ಅವರು ಏಫೋದನ್ನು ಚಿನ್ನದ ದಾರದಿಂದಲೂ ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಿದರು. |
3
|
(ಅವರು ಚಿನ್ನವನ್ನು ಸುತ್ತಿಗೆಯಿಂದ ಹೊಡೆದು ತೆಳುವಾದ ತಗಡುಗಳನ್ನು ಮಾಡಿದರು. ಬಳಿಕ ಅವರು ಅದನ್ನು ಕತ್ತರಿಸಿ ಉದ್ದವಾದ ದಾರಗಳನ್ನಾಗಿ ಮಾಡಿದರು. ಅವರು ಚಿನ್ನವನ್ನು ನೀಲಿ, ನೇರಳೆ, ಕೆಂಪುದಾರಗಳಿಗೂ ಮತ್ತು ಶ್ರೇಷ್ಠ ನಾರುಬಟ್ಟೆಗೂ ಹೆಣೆದರು. ಇದು ಬಹಳ ನಿಪುಣನಾದ ಕೆಲಸಗಾರನು ಮಾಡಿದ ಕೆಲಸವಾಗಿತ್ತು.) |
4
|
ಅವರು ಏಫೋದಿನ ಭುಜದ ಪಟ್ಟಿಗಳನ್ನು ಮಾಡಿದರು. ಅವರು ಈ ಭುಜದ ಪಟ್ಟಿಗಳನ್ನು ಏಫೋದಿನ ಎರಡು ಮೂಲೆಗಳಿಗೆ ಕಟ್ಟಿದರು. |
5
|
ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋದನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠ ನಾರುಬಟ್ಟೆಯನ್ನು ಮತ್ತು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. |
6
|
ಕೆಲಸಗಾರರು ಗೋಮೇಧಕ ರತ್ನಗಳನ್ನು ಏಫೋದಿನೊಳಗೆ ಚಿನ್ನದ ಕುಂದಣದಲ್ಲಿ ಇಟ್ಟರು. ಈ ರತ್ನಗಳಲ್ಲಿ ಇಸ್ರೇಲರ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದರು. |
7
|
ಬಳಿಕ ಅವರು ಈ ರತ್ನಗಳನ್ನು ಏಫೋದಿನ ಭುಜದ ಪಟ್ಟಿಯಲ್ಲಿ ಇಟ್ಟರು. ಇಸ್ರೇಲರನ್ನು ದೇವರ ಜ್ಞಾಪಕಕ್ಕೆ ತರುವಂತೆ ಈ ರತ್ನಗಳು ಇಡಲ್ಪಟ್ಟವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಯಿತು. |
8
|
ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬುಟೇದಾರೀ ಕೆಲಸವಾಗಿತ್ತು. ಅದನ್ನು ಚಿನ್ನದ ದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಯಿತು. |
9
|
ದೈವನಿರ್ಣಯದ ಪದಕವನ್ನು ಅರ್ಧ ಮಡಚಿ ಚಚ್ಚೌಕವಾದ ಚೀಲವನ್ನಾಗಿ ಮಾಡಲಾಗಿತ್ತು. ಅದು ಒಂಭತ್ತು ಇಂಚು ಉದ್ದ ಮತ್ತು ಒಂಭತ್ತು ಇಂಚು ಅಗಲ ಇತ್ತು. |
10
|
ಬಳಿಕ ಕೆಲಸಗಾರರು ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ದೈವನಿರ್ಣಯದ ಪದಕದಲ್ಲಿ ಇಟ್ಟರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ, ಸ್ಫಟಿಕಗಳು ಇದ್ದವು. |
11
|
ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲಪಚ್ಚೆಗಳು ಇದ್ದವು. |
12
|
ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ, ಧೂಮ್ರಮಣಿಗಳು ಇದ್ದವು. |
13
|
ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳು ಇದ್ದವು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಇಟ್ಟರು. |
14
|
ಇಸ್ರೇಲನ ಗಂಡುಮಕ್ಕಳಲ್ಲಿ ಒಬ್ಬೊಬ್ಬರಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿದ್ದವು. ಪ್ರತಿ ರತ್ನದಲ್ಲಿಯೂ ಇಸ್ರೇಲನ ಗಂಡುಮಕ್ಕಳಲ್ಲಿ ಒಬ್ಬೊಬ್ಬನ ಹೆಸರು ಬರೆಯಲ್ಪಟ್ಟಿತ್ತು. ಮುದ್ರಾರತ್ನವನ್ನು ಕೆತ್ತುವಂತೆ ಕಲ್ಲಿನಲ್ಲಿ ಹೆಸರುಗಳನ್ನು ಕೆತ್ತಿದರು. |
15
|
ಅವರು ದೈವನಿರ್ಣಯಪದಕಕ್ಕೆ ಅಪ್ಪಟ ಬಂಗಾರದ ಸರಪಣಿಗಳನ್ನು ಹುರಿಗಳಂತಿರುವ ಹಗ್ಗದಂತೆ ಮಾಡಿದರು. |
16
|
ಕೆಲಸಗಾರರು ಎರಡು ಚಿನ್ನದ ಕುಂದಣಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿದರು. ಅವರು ಎರಡು ಚಿನ್ನದ ಉಂಗುರಗಳನ್ನು ದೈವನಿರ್ಣಯಪದಕದ ಎರಡು ಕೊನೆಗಳಲ್ಲಿ ಇರಿಸಿದರು. |
17
|
ಬಳಿಕ ಅವರು ದೈವನಿರ್ಣಯಪದಕದ ಕೊನೆಗಳಲ್ಲಿರುವ ಉಂಗುರಗಳಿಗೆ ಎರಡು ಚಿನ್ನದ ಸರಪಣಿಗಳನ್ನು ಸಿಕ್ಕಿಸಿದರು. |
18
|
ಅವರು ಚಿನ್ನದ ಸರಪಣಿಗಳ ಇನ್ನೆರಡು ಕೊನೆಗಳನ್ನು ಎರಡು ಕುಂದಣಗಳಿಗೆ ಕಟ್ಟಿದರು. ಇದು ಅವುಗಳನ್ನು ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಮುಂಭಾಗದಲ್ಲಿ ಬಿಗಿಯಾಗಿ ಹಿಡಿದುಕೊಂಡಿತು. |
19
|
ಬಳಿಕ ಅವರು ಇನ್ನೆರಡು ಚಿನ್ನದ ಉಂಗುರಗಳನ್ನು ಮಾಡಿ, ದೈವನಿರ್ಣಯ ಪದಕದ ಇನ್ನೆರಡು ಕೊನೆಗಳಿಗೆ ಸಿಕ್ಕಿಸಿದರು. ಅವರು ಉಂಗುರಗಳನ್ನು ಏಫೋದಿನ ಹತ್ತಿರವಿರುವ ದೈವನಿರ್ಣಯ ಪದಕದ ಒಳಗಿನ ಅಂಚಿನಲ್ಲಿ ಇರಿಸಿದರು. |
20
|
ಅವರು ಎರಡು ಚಿನ್ನದ ಉಂಗುರಗಳನ್ನು ಏಫೋದಿನ ಮುಂಭಾಗದಲ್ಲಿ ಭುಜದ ಪಟ್ಟಿಗಳ ಕೆಳಭಾಗದಲ್ಲಿ ಇರಿಸಿದರು. ಈ ಉಂಗುರಗಳು ನಡುಕಟ್ಟಿನ ಮೇಲ್ಗಡೆಯಲ್ಲಿರುವ ಕಟ್ಟಿನ ಹತ್ತಿರ ಇದ್ದವು. |
21
|
ಬಳಿಕ ಅವರು ನೀಲಿದಾರದಿಂದ ದೈವನಿರ್ಣಯ ಪದಕದ ಉಂಗುರಗಳನ್ನು ಏಫೋದಿನ ಉಂಗುರಗಳಿಗೆ ಕಟ್ಟಿದರು. ಈ ರೀತಿಯಾಗಿ ದೈವನಿರ್ಣಯ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಅವರು ಎಲ್ಲವನ್ನೂ ಮಾಡಿದರು. |
22
|
ಬಳಿಕ ಅವರು ಏಫೋದಿನೊಂದಿಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ಮಾಡಿದರು. ಅದು ನಿಪುಣನಾದ ಕೆಲಸಗಾರನಿಂದ ಹೆಣೆಯಲ್ಪಟ್ಟಿತ್ತು. ಅವರು ಅದನ್ನು ನೀಲಿ ಬಟ್ಟೆಯಿಂದ ಮಾಡಿದರು. |
23
|
ಅವರು ನಿಲುವಂಗಿಯ ಮಧ್ಯದಲ್ಲಿ ಒಂದು ಸಂದನ್ನು ಮಾಡಿ ಆ ಸಂದಿನ ಅಂಚಿನ ಸುತ್ತಲೂ ಬಟ್ಟೆಯನ್ನಿಟ್ಟು ಹೊಲಿದರು. ಈ ಬಟ್ಟೆಯು ಸಂದು ಹರಿದು ಹೋಗದಂತೆ ಮಾಡಿತು. |
24
|
ತರುವಾಯ ಅವರು ಬಟ್ಟೆಗೆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ಮಾಡಲು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಈ ದಾಳಿಂಬೆ ಹಣ್ಣಿನಂತಿರುವ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ತೂಗುಹಾಕಿದರು. |
25
|
ಬಳಿಕ ಅವರು ಅಪ್ಪಟ ಬಂಗಾರದ ಗೆಜ್ಜೆಗಳನ್ನು ಮಾಡಿದರು. ಅವರು ಈ ಗೆಜ್ಜೆಗಳನ್ನು ನಿಲುವಂಗಿಯ ಕೆಳಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳ ನಡುವೆ ತೂಗು ಹಾಕಿದರು. |
26
|
ಹೀಗೆ ನಿಲುವಂಗಿಯ ಕೆಳಅಂಚಿನ ಸುತ್ತಲೆಲ್ಲ ದಾಳಿಂಬೆ ಹಣ್ಣುಗಳೂ ಗೆಜ್ಜೆಗಳೂ ಇದ್ದವು. ಪ್ರತಿ ದಾಳಿಂಬೆ ಹಣ್ಣಿನ ನಡುವೆ ಒಂದೊಂದು ಗೆಜ್ಜೆ ಇತ್ತು. ಯಾಜಕರು ಯೆಹೋವನ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ನಿಲುವಂಗಿ ಇದಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಗಿತ್ತು. |
27
|
ನಿಪುಣರಾದ ಕೆಲಸಗಾರರು ಆರೋನನಿಗೂ ಅವನ ಮಕ್ಕಳಿಗೂ ಅಂಗಿಗಳನ್ನು ಹೊಲಿದರು. ಈ ಅಂಗಿಗಳು ಶ್ರೇಷ್ಠವಾದ ನಾರುಬಟ್ಟೆಯಿಂದ ಮಾಡಲ್ಪಟ್ಟವು. |
28
|
ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು. |
29
|
ಬಳಿಕ ಅವರು ಶ್ರೇಷ್ಠವಾದ ನಾರುಬಟ್ಟೆಯಿಂದಲೂ ಮತ್ತು ನೀಲಿ, ನೇರಳೆ, ಕೆಂಪುದಾರಗಳಿಂದಲೂ ನಡುಕಟ್ಟನ್ನು ಮಾಡಿದರು. ಈ ಬಟ್ಟೆಗೆ ಕಸೂತಿ ಹಾಕಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಈ ವಸ್ತುಗಳನ್ನು ಮಾಡಲಾಯಿತು. |
30
|
ತರುವಾಯ ಅವರು ಪವಿತ್ರಕಿರೀಟವನ್ನೂ ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, “ಯೆಹೋವನಿಗೆ ಪವಿತ್ರವಾದದ್ದು” ಎಂಬ ಮಾತುಗಳನ್ನು ಬರೆದರು. |
31
|
ಅವರು ಚಿನ್ನದ ಪಟ್ಟಿಯನ್ನು ದಾರಕ್ಕೆ ಬಿಗಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಈ ನೀಲಿ ದಾರವನ್ನು ಮುಂಡಾಸಕ್ಕೆ ಕಟ್ಟಿದರು. ಮೋಶೆಯು ಪವಿತ್ರಗುಡಾರವನ್ನು ಪರೀಕ್ಷಿಸಿದ್ದು |
32
|
ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು. |
33
|
ಬಳಿಕ ಅವರು ಪವಿತ್ರಗುಡಾರವನ್ನು ಮೋಶೆಗೆ ತೋರಿಸಿದರು. ಅವರು ಗುಡಾರವನ್ನೂ ಅದರಲ್ಲಿರುವ ವಸ್ತುಗಳನ್ನೆಲ್ಲಾ ಅವನಿಗೆ ತೋರಿಸಿದರು. ಬಳೆಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳನ್ನೆಲ್ಲಾ ಅವನಿಗೆ ತೋರಿಸಿದರು. |
34
|
ಅವರು ಕೆಂಪುಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಹೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾಪವಿತ್ರಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು. |
35
|
ಅವರು ಮೋಶೆಗೆ ಒಡಂಬಡಿಕೆಯ ಪೆಟ್ಟಿಗೆಯನ್ನೂ ಆ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಉಪಯೋಗಿಸುವ ಕೋಲುಗಳನ್ನೂ ಪೆಟ್ಟಿಗೆಯ ಕೃಪಾಸನವನ್ನೂ ಮೋಶೆಗೆ ತೋರಿಸಿದರು. |
36
|
ಅವರು ಮೇಜನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ನೈವೇದ್ಯದ ರೊಟ್ಟಿಯನ್ನೂ ಅವನಿಗೆ ತೋರಿಸಿದರು. |
37
|
ಅವರು ಅಪ್ಪಟ ಬಂಗಾರದ ದೀಪಸ್ತಂಭವನ್ನೂ ಅದರಲ್ಲಿರುವ ಹಣತೆಗಳನ್ನೂ ಎಣ್ಣೆಯನ್ನೂ ಹಣತೆಗಳೊಂದಿಗೆ ಉಪಯೋಗಿಸುವ ಇತರ ವಸ್ತುಗಳನ್ನೂ ತೋರಿಸಿದರು. |
38
|
ಅವರು ಚಿನ್ನದ ವೇದಿಕೆಯನ್ನೂ ಅಭಿಷೇಕತೈಲವನ್ನೂ ಪರಿಮಳಧೂಪವನ್ನೂ ಗುಡಾರದ ಪ್ರವೇಶದಲ್ಲಿರುವ ಪರದೆಯನ್ನೂ ಮೋಶೆಗೆ ತೋರಿಸಿದರು. |
39
|
ಅವರು ಅವನಿಗೆ ತಾಮ್ರದ ವೇದಿಕೆಯನ್ನೂ ತಾಮ್ರದ ಜಾಳಿಗೆಯನ್ನೂ ವೇದಿಕೆಯನ್ನು ಹೊರುವುದಕ್ಕೆ ಉಪಯೋಗಿಸುವ ಕೋಲುಗಳನ್ನೂ ವೇದಿಕೆಯ ಎಲ್ಲಾ ಉಪರಕಣಗಳನ್ನೂ ಗಂಗಾಳವನ್ನೂ ಮತ್ತು ಅದರ ಕೆಳಗಿರುವ ಗದ್ದಿಗೇಕಲ್ಲನ್ನೂ ಮೋಶೆಗೆ ತೋರಿಸಿದರು. |
40
|
ಅವರು ಅಂಗಳದ ಸುತ್ತಲಿರುವ ಪರದೆಗಳ ಗೋಡೆಯನ್ನೂ ಅದರ ಕಂಬಗಳನ್ನೂ ಗದ್ದಿಗೇಕಲ್ಲುಗಳನ್ನೂ ಅಂಗಳದ ಪ್ರವೇಶವನ್ನು ಮುಚ್ಚುವ ಪರದೆಯನ್ನೂ ಹಗ್ಗಗಳನ್ನೂ ಗುಡಾರದ ಗೂಟಗಳನ್ನೂ ದೇವದರ್ಶನದ ಪವಿತ್ರಗುಡಾರದ ಎಲ್ಲಾ ವಸ್ತುಗಳನ್ನೂ ಮೋಶೆಗೆ ತೋರಿಸಿದರು. |
41
|
ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ. |
42
|
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಇವುಗಳನ್ನೆಲ್ಲಾ ಮಾಡಿದರು. |
43
|
ಮೋಶೆಯು ಎಲ್ಲಾ ಕೆಲಸವನ್ನು ಸೂಕ್ಷ್ಮವಾಗಿ ಪರೀಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟಿದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು. |
Exodus 39:1 Kannada Language Bible Words basic statistical display
COMING SOON ...