1
|
ಮೋಶೆಗೆ ಸಾಕ್ಷಿ ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು. |
2
|
ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು. |
3
|
ಆಗ ಯೆಹೋವನು, “ನಿನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡು” ಅಂದನು. ಮೋಶೆ, ತನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡಿದನು. ಆಗ ಕೋಲು ಹಾವಾಯಿತು. ಮೋಶೆ ಅದರ ಬಳಿಯಿಂದ ಓಡಿಹೋದನು. |
4
|
ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿದುಕೊ” ಎಂದು ಹೇಳಿದನು.’ ಮೋಶೆಯು ಕೈಚಾಚಿ ಹಾವಿನ ಬಾಲವನ್ನು ಹಿಡಿದನು. ಆಗ ಹಾವು ಕೋಲಾಯಿತು. |
5
|
ಆಗ ದೇವರು, “ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು. |
6
|
ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು. |
7
|
ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು. |
8
|
ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು. |
9
|
ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು. |
10
|
ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು. |
11
|
ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ. |
12
|
ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು. |
13
|
ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು. |
14
|
ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನೂ ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು. |
15
|
ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು. |
16
|
ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು. |
17
|
ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು. ಮೋಶೆ ಈಜಿಪ್ಟಿಗೆ ಹಿಂತಿರುಗಿದ್ದು |
18
|
ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು. |
19
|
ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು. |
20
|
ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು. |
21
|
ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ. |
22
|
ಆಗ ನೀನು ಫರೋಹನಿಗೆ, ‘ಇಸ್ರೇಲ್ ಜನಾಂಗವು ಯೆಹೋವನಿಗೆ ಚೊಚ್ಚಲು ಮಗನಂತಿದೆ. |
23
|
ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು. |
24
|
ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು. |
25
|
ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು. |
26
|
ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಎಂದು ಹೇಳಿದ್ದರಿಂದ ಯೆಹೋವನು ಅವನನ್ನು ಉಳಿಸಿದನು. |
27
|
ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು. |
28
|
ಯೆಹೋವನು ಹೇಳಿದ್ದನ್ನೆಲ್ಲಾ ಮೋಶೆಯು ಆರೋನನಿಗೆ ತಿಳಿಸಿದನು. ಯೆಹೋವನು ತನ್ನನ್ನು ಯಾಕೆ ಕಳುಹಿಸಿದನೆಂದೂ ತಾನು ಯಾವ ಅದ್ಭುತಕಾರ್ಯಗಳನ್ನು ಮಾಡಬೇಕೆಂದೂ ಆರೋನನಿಗೆ ವಿವರಿಸಿದನು. |
29
|
ಆದ್ದರಿಂದ ಮೋಶೆ ಆರೋನರು ಹೋಗಿ ಇಸ್ರೇಲ್ ಜನರ ಹಿರಿಯರೆಲ್ಲರನ್ನು ಒಟ್ಟುಗೂಡಿಸಿದರು. |
30
|
ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರೆಲ್ಲರೂ ನೋಡುವಂತೆ ಸಾಕ್ಷ್ಯಾಧಾರಗಳನ್ನು ಮಾಡಿದನು. |
31
|
ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು. ಫರೋಹನ ಮುಂದೆ ಮೋಶೆ ಆರೋನರು |
Exodus 4:1 Kannada Language Bible Words basic statistical display
COMING SOON ...