ಅದರ ಬಗ್ಗೆ ಈ ರೀತಿಯಾಗಿ ಹೇಳು: “ ‘ತೂರೇ, ನೀನು ಸಮುದ್ರಕ್ಕೆ ಬಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವೆ.’ ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. ತೂರೇ, ನೀನು ಅತಿ ಸುಂದರಳೆಂದು ಭಾವಿಸಿರುವೆ. ನೀನು ಪರಿಪೂರ್ಣ ಸುಂದರಳೆಂದು ತಿಳಿದಿರುವೆ.
ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರುಮಡಿಯನ್ನು ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. ಆ ಹಾಯಿಯು ನಿನ್ನ ಧ್ವಜವಾಯಿತು. ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದಿಬಪದಿಂದ ಬಂದವುಗಳಾಗಿದ್ದವು.
“ ‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಬನತೆಯನ್ನು ಅವರು ತಂದರು.
ಅರ್ವಾದ್ ಮತ್ತು ಸಿಲಿಸಿಯಾದ ಜನರು ನಿನ್ನ ಕೋಟೆಗೋಡೆಗಳಲ್ಲಿ ಕಾವಲಿಗಿರುವರು. ಗಮ್ಮಾದಿನಿಂದ ಬಂದ ಜನರು ನಿನ್ನ ಬುರುಜುಗಳಲ್ಲಿರುವರು. ನಿನ್ನ ಸೌಂದರ್ಯವನ್ನು ಅವರು ಪರಿಪೂರ್ಣ ಮಾಡಿದರು.
ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿದ ಕೊಂಡುಕೊಂಡರು.
ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು.
ನಿನ್ನ ಎಲ್ಲಾ ಐಶಬರ್ಯವು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಿಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು.
ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶಬರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶಬರ್ಯವಂತರನ್ನಾಗಿ ಮಾಡಿದಿ.
ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು. ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’ ”