ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.
ಅವನು ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ ಮೊಳ ಅಳೆದನು. ನನ್ನನ್ನು ಆ ಸ್ಥಳದಲ್ಲಿ ನೀರಿನಲ್ಲಿ ನಡೆದುಕೊಂಡು ಬರುವಂತೆ ಹೇಳಿದನು. ನೀರು ನನ್ನ ಪಾದ ಮುಳುಗುವಷ್ಟು ಆಳವಿತ್ತು.
ಅವನು ತಿರುಗಿ ಸಾವಿರ ಮೊಳ ಅಳೆದನು. ಆ ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಆ ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಸೊಂಟದಷ್ಟು ಆಳವಾಗಿತ್ತು.
ಅವನು ಇನ್ನೂ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನ್ನಿದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡಬಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು.
ಇದು ಮೃತ್ಯುಸಮುದ್ರವನ್ನು ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು, ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.
ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.
ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”
ಅಲ್ಲಿಂದ ಬೇರೋತ್ ಕಡೆಗೂ ಅಲ್ಲಿಂದ ಸಿಬ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.
“ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.
“ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ.
ನೀವು ಇದನ್ನು ಸ್ವಂತ ಸಾಬಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.