English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Ezekiel Chapters

Ezekiel 7 Verses

1 ಯೆಹೋವನ ಸಂದೇಶವು ನನಗೆ ಬಂದಿತು.
2 ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. “ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು.
3 ನಿನ್ನ ಅಂತ್ಯವು ಈಗ ಬರುವುದು. ನಿನ್ನ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನ್ನ ದುಷ್ಕೃತ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು. ನಿನ್ನ ಅಸಹ್ಯಕೃತ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.
4 ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”
5 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಂದರ ಮೇಲೊಂದು ದುರ್ಬಟನೆಗಳು ನಡೆಯುವವು.
6 ಅಂತ್ಯವು ಬರುವುದು. ಅದು ಬೇಗನೆ ಬರುವದು.
7 ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.
8 ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.
9 ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.
10 “ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.
11 ದುಷ್ಟತನವನ್ನು ದಂಡಿಸಲು ಹಿಂಸೆಯು ಬೆಳೆದು ಕೋಲಾಗಿದೆ. ಜನರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿ ಒಬ್ಬರೂ ಉಳಿಯುವುದಿಲ್ಲ. ಅವರ ಐಶಬರ್ಯದಲ್ಲಿ ಏನೂ ಉಳಿಯುವದಿಲ್ಲ; ಪ್ರಮುಖರಾದವರಲ್ಲಿ ಯಾರೂ ಉಳಿಯುವುದಿಲ್ಲ.
12 “ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.
13 ತಮ್ಮ ಆಸ್ತಿಗಳನ್ನು ಮಾರಿದ ಜನರು ಅಲ್ಲಿಗೆ ತಿರುಗಿ ಹೋಗುವುದಿಲ್ಲ. ಒಬ್ಬನು ಜೀವಂತವಾಗಿ ತಪ್ಪಿಸಿಕೊಂಡರೂ ತನ್ನ ಆಸ್ತಿಗೆ ಹೋಗುವುದಿಲ್ಲ. ಯಾಕೆಂದರೆ ಈ ದರ್ಶನವು ಎಲ್ಲಾ ಜನಸಮೂಹಕ್ಕಾಗಿದೆ. ಇದು ಬದಲಾಗುವುದಿಲ್ಲ; ಅವರ ಪಾಪಗಳ ದೆಸೆಯಿಂದ ಅವರಲ್ಲಿ ಒಬ್ಬನಾದರೂ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವುದಿಲ್ಲ.
14 “ಅವರು ಜನರನ್ನು ಎಚ್ಚರಿಸುವುದಕ್ಕಾಗಿ ತುತ್ತೂರಿಯನ್ನು ಧಿದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವುದಿಲ್ಲ. ಯಾಕೆಂದರೆ ಆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ತೋರಿಸುತ್ತೇನೆ.
15 ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.
16 “ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.
17 ತಮ್ಮ ಕೈಗಳನ್ನು ಮೇಲಕ್ಕೆ ಎತ್ತುವಷ್ಟು ದುಃಖ ಮತ್ತು ಆಯಾಸ ಅವರಲ್ಲಿದೆ. ಅವರ ಕಾಲುಗಳು ನೀರಿನಂತಿರುತ್ತವೆ.
18 ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವುದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು.
19 ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.
20 “ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.
21 ಬೇರೆ ದೇಶದವರು ಅವರ ಐಶಬರ್ಯವನ್ನು ಲೂಟಿಮಾಡಿಕೊಂಡು ಹೋಗಲು ನಾನು ಅವಕಾಶಕೊಡುವೆನು. ಭೂಮಿಯ ಮೇಲಿರುವ ಅತ್ಯಂತ ದುಷ್ಟರಾದ ಜನರಿಗೆ ನಾನು ಅದನ್ನು ಕೊಳ್ಳೆಯನ್ನಾಗಿ ಕೊಡುವೆನು. ಅವರು ಅದನ್ನು ಹೊಲಸು ಮಾಡುವರು.
22 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು. ಆ ಪರದೇಶಿಯರು ನನ್ನ ಅಮೂಲ್ಯವಾದ ಆಲಯವನ್ನು ಹೊಲಸು ಮಾಡುವರು. ದರೋಡೆಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು.
23 “ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ.
24 ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.
25 “ಜನರು ಭಯದಿಂದ ನಡುಗುವರು. ಅವರು ಶಾಂತಿಗಾಗಿ ಹುಡುಕುವರು, ಆದರೆ ಅವರಿಗೆ ಅದು ಸಿಗುವುದಿಲ್ಲ.
26 ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.
27 ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”
×

Alert

×