English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Ezra Chapters

Ezra 4 Verses

1 (1-2) ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.
3 ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕೆಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”
4 ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.
5 ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು.
6 ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.
7 ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.
8 ಅದಕ್ಕೆ ದೇಶಾಧಿಪತಿಯಾದ ರೆಹೂಮ ಮತ್ತು ಕಾರ್ಯದರ್ಶಿಯಾದ ಶಿಂಷೈ ಜೆರುಸಲೇಮಿನ ನಿವಾಸಿಗಳ ವಿರುದ್ಧವಾಗಿ ರಾಜ ಅರ್ತಷಸ್ತನಿಗೆ ಈ ರೀತಿ ಬರೆದರು:
9 ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,
10 ಮತ್ತು ಮಹಾ ಬಲಿಷ್ಠನಾದ ಅಷೂರ್ ಬನಿಪಾಲನು ಕರೆತಂದು ಸಮಾರ್ಯ ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ಇರಿಸಿದ ಇತರ ಜನರು,
11 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಸೇವಕರು ಅರ್ತಷಸ್ತ ರಾಜನಿಗೆ ಬರೆಯುವ ಪತ್ರ:
12 ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.
13 ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.
14 ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದ್ದರಿಂದಲೇ ರಾಜರಿಗೆ ಈ ಪತ್ರವನ್ನು ಕಳುಹಿಸುತ್ತಿದ್ದೇವೆ.
15 ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.
16 ರಾಜನಾದ ಅರ್ತಷಸ್ತನೇ, ಈ ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗಿ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ.
17 ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.
18 ನೀವು ಕಳುಹಿಸಿದ ಪತ್ರವನ್ನು ಭಾಷಾಂತರ ಮಾಡಿ ನನಗೆ ತಿಳಿಸಲಾಯಿತು.
19 ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ಆ ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು.
20 ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.
21 ಈಗ ನೀವು ಜೆರುಸಲೇಮ್‌ನಲ್ಲಿ ನಡೆಯುವ ಕೆಲಸವನ್ನು ನಿಲ್ಲಿಸುವಂತೆ ಆಜ್ಞಾಪಿಸಬೇಕು. ನಾನು ತಿಳಿಸುವ ತನಕ ಅದು ತಿರಿಗಿ ಕಟ್ಟಲ್ಪಡಬಾರದು.
22 ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.
23 ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.
24 ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.
×

Alert

×