English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Ezra Chapters

Ezra 6 Verses

1 ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೆಷನು ಶೋಧಿಸಿದನು. ಈ ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು.
2 ಮೇದ್ಯ ಪ್ರಾಂತ್ಯದ ಎಕ್‌ಬಟಾನ ಎಂಬ ಕೋಟೆಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು: ಸರಕಾರದ ಆಜ್ಞೆ:
3 ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ್ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ತಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು.
4 ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚುವೆಚ್ಚವೆಲ್ಲವನ್ನು ರಾಜನ ಖಜಾನೆಯಿಂದ ಕೊಡಬೇಕು.
5 ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನು ಜೆರುಸಲೇಮಿನ ದೇವಾಲಯದಿಂದ ನೆಬೂಕದ್ನೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು.
6 ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನೆಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ.
7 ಕೆಲಸ ಮಾಡುವವರನ್ನು ತೊಂದರೆಪಡಿಸಬೇಡಿ. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡಬೇಡಿ. ಯೆಹೂದ್ಯರ ದೇಶಾಧಿಪತಿ ಮತ್ತು ಯೆಹೂದ್ಯ ನಾಯಕರು ಅದನ್ನು ಮತ್ತೆ ಕಟ್ಟಲಿ. ಹಿಂದಿನ ದೇವಾಲಯವಿದ್ದಲ್ಲಿಯೇ ಹೊಸದನ್ನು ಕಟ್ಟಲಿ.
8 ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.
9 ಆ ಜನರಿಗೆ ಏನು ಅವಶ್ಯಕತೆಯಿದೆಯೋ ಅದನ್ನು ಪೂರೈಸಬೇಕು. ಅವರಿಗೆ ಎಳೆಹೋರಿಗಳು, ಟಗರುಗಳು, ಗಂಡುಕುರಿಗಳು ಪರಲೋಕದ ದೇವರಿಗೆ ಯಜ್ಞವನ್ನರ್ಪಿಸಲು ಬೇಕಾಗಿದ್ದರೆ ಅವುಗಳನ್ನು ಕೊಡಿರಿ. ಜೆರುಸಲೇಮಿನ ಯಾಜಕರು ಗೋಧಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಬೇಕು ಎಂದು ಹೇಳಿದರೆ ಅದನ್ನು ಪ್ರತಿದಿನ ತಪ್ಪದೆ ಒದಗಿಸಿರಿ.
10 ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.
11 ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.
12 ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
13 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು.
14 ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.
15 ಆದಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು.
16 ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.
17 ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.
18 ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಆರಿಸಿದರು.
19 ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಕಹಬ್ಬವನ್ನು ಆಚರಿಸಿದರು.
20 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು.
21 ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.
22 ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.
×

Alert

×