1
|
ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ. |
2
|
ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ. |
3
|
ಕ್ರಿಸ್ತನಲ್ಲಿಯ ನಿಮ್ಮ ಜೀವಿತವನ್ನು ಪವಿತ್ರಾತ್ಮನೊಂದಿಗೆ ಆರಂಭಿಸಿದಿರಿ. ಈಗ ಅದನ್ನು ನಿಮ್ಮ ಸ್ವಂತ ಶಕ್ತಿಯೊಂದಿಗೆ ಮುಂದುವರಿಸಲು ಪ್ರಯತ್ನಿಸುತ್ತೀರೋ? ಅದು ಬುದ್ಧಿಹೀನತೆ! |
4
|
ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ? |
5
|
ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ. |
6
|
ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.” |
7
|
ಆದ್ದರಿಂದ ನಂಬಿಕೆಯನ್ನು ಹೊಂದಿರುವ ಜನರೇ ಅಬ್ರಹಾಮನ “ನಿಜಮಕ್ಕಳು” ಎಂಬುದು ನಿಮಗೆ ತಿಳಿದಿರಬೇಕು. |
8
|
ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ. |
9
|
ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು. |
10
|
ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.” |
11
|
ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.” |
12
|
ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ. |
13
|
ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.” |
14
|
ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣ ಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ. |
15
|
ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ. |
16
|
ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು. |
17
|
ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ. |
18
|
ದೇವರು ವಾಗ್ದಾನ ಮಾಡಿದಂಥವುಗಳು ಧರ್ಮಶಾಸ್ತ್ರದ ಅನುಸರಣೆಯಿಂದ ದೊರೆಯುತ್ತವೆಯೇ? ಇಲ್ಲ! ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನಾವು ಅವುಗಳನ್ನು ಪಡೆದುಕೊಳ್ಳಬಹುದಾಗಿದ್ದರೆ ಅವುಗಳನ್ನು ನಮಗೆ ಕೊಡುವಂಥದ್ದು ದೇವರ ವಾಗ್ದಾನವಲ್ಲ. ಆದರೆ ದೇವರು ತಾನು ಮಾಡಿದ ವಾಗ್ದಾನದ ಮೂಲಕ ತನ್ನ ಆಶೀರ್ವಾದಗಳನ್ನು ಅಬ್ರಹಾಮನಿಗೆ ಉಚಿತವಾಗಿ ಕೊಟ್ಟನು. |
19
|
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು. |
20
|
ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ. |
21
|
ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು. |
22
|
ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ. |
23
|
ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ. |
24
|
ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು. |
25
|
ಈಗ ನಂಬಿಕೆಯ ಮಾರ್ಗವು ಬಂದಿದೆ. ಆದ್ದರಿಂದ ಈಗ ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸುವುದಿಲ್ಲ. |
26
|
[This verse may not be a part of this translation] |
27
|
[This verse may not be a part of this translation] |
28
|
ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ. |
29
|
ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ. |
Galatians 3:1 Kannada Language Bible Words basic statistical display
COMING SOON ...