1
|
ನಾನು ಮತ್ತೆ ಹೇಳುವುದೇನಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು. |
2
|
ಏಕೆಂದರೆ ಅವನಿನ್ನೂ ಬಾಲಕನಾಗಿರುವಾಗ ಪರಿಪಾಲಕರಿಗೆ ಮತ್ತು ನಿರ್ವಾಹಕರಿಗೆ ವಿಧೇಯನಾಗಿರಬೇಕು. ಆದರೆ ತನ್ನ ತಂದೆಯು ಗೊತ್ತುಪಡಿಸಿದ ವಯಸ್ಸನ್ನು ತಲುಪಿದಾಗ ಆ ಬಾಲಕನು ಸ್ವತಂತ್ರನಾಗುವನು. |
3
|
ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು. |
4
|
ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು. |
5
|
ಧರ್ಮಶಾಸ್ತ್ರದ ಅಧೀನದಲ್ಲಿದ್ದ ನಮ್ಮನ್ನು ಬಿಡಿಸಿ ತನ್ನ ಮಕ್ಕಳನ್ನಾಗಿ ಮಾಡಿಕೊಳ್ಳಬೇಕೆಂಬುದೇ ದೇವರ ಉದ್ದೇಶವಾಗಿತ್ತು. |
6
|
ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ. |
7
|
ಆದ್ದರಿಂದ ಈಗ ನೀನು ಮೊದಲಿನಂತೆ ಗುಲಾಮನಲ್ಲ. ನೀನು ದೇವರ ಮಗನು. ನೀನು ದೇವರ ಮಗನಾಗಿರುವುದರಿಂದ ಆತನು ನಿನ್ನನ್ನು ಬಾಧ್ಯಸ್ತನನ್ನಾಗಿಯೂ ಮಾಡಿದ್ದಾನೆ. |
8
|
ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ. |
9
|
ಈಗಲಾದರೊ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ? |
10
|
ವಿಶೇಷವಾದ ದಿನಗಳ, ಮಾಸಗಳ, ಕಾಲಮಾನಗಳ ಮತ್ತು ವರ್ಷಗಳ ಕುರಿತು ಧರ್ಮಶಾಸ್ತ್ರವು ಹೇಳುವ ಉಪದೇಶವನ್ನು ಇನ್ನೂ ಅನುಸರಿಸುತ್ತಿದ್ದೀರಿ. |
11
|
ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ. |
12
|
ಸಹೋದರ ಸಹೋದರಿಯರೇ, ನಾನೂ ನಿಮ್ಮಂತಿದ್ದೆನು. ಆದ್ದರಿಂದ ದಯವಿಟ್ಟು ನನ್ನಂತೆ ಆಗಿರಿ. |
13
|
ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ. |
14
|
ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ. |
15
|
ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ. |
16
|
ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ? |
17
|
ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು. |
18
|
ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ. |
19
|
ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ಈ ನೋವಿರುತ್ತದೆ. |
20
|
ಈಗ ನಾನು ನಿಮ್ಮೊಂದಿಗಿದ್ದಿದ್ದರೆ ಬೇರೊಂದು ರೀತಿಯಲ್ಲಿ ತಿಳಿಸಬಹುದಾಗಿತ್ತು. ನಿಮ್ಮ ವಿಷಯದಲ್ಲಿ ಈಗ ಏನು ಮಾಡಬೇಕೊ ನನಗೆ ತಿಳಿಯದು. |
21
|
ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ. |
22
|
ಪವಿತ್ರ ಗ್ರಂಥವು ಹೇಳುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಗಂಡುಮಕ್ಕಳಿದ್ದರು. ಒಬ್ಬ ಮಗನ ತಾಯಿಯು ದಾಸತ್ವದಲ್ಲಿದ್ದಳು, ಮತ್ತೊಬ್ಬ ಮಗನ ತಾಯಿಯು ಸ್ವತಂತ್ರಳಾಗಿದ್ದಳು. |
23
|
ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೊ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು. |
24
|
ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು. |
25
|
ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ. |
26
|
ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ. |
27
|
ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಮಕ್ಕಳನ್ನು ಹೆತ್ತಿಲ್ಲದ ಬಂಜೆಯೇ, ಸಂತೋಷಪಡು. ಪ್ರಸವವೇದನೆಯಿಲ್ಲದವಳೇ, ಸ್ವರವೆತ್ತಿ ಕೂಗು. ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು.” ಯೆಶಾಯ 54:1 |
28
|
[This verse may not be a part of this translation] |
29
|
[This verse may not be a part of this translation] |
30
|
ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.” |
31
|
ಆದ್ದರಿಂದ, ನನ್ನ ಸಹೋದರ ಸಹೋದರಿಯರೇ, ನಾವು ದಾಸಿಯ ಮಕ್ಕಳಲ್ಲ. ನಾವು ಸ್ವತಂತ್ರಳಾದ ಸ್ತ್ರೀಯ ಮಕ್ಕಳಾಗಿದ್ದೇವೆ. |
Galatians 4:1 Kannada Language Bible Words basic statistical display
COMING SOON ...