ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ [*ಆಶೀರ್ವಾದದಾಯಕ ಜನರು ಬೇರೆಯವರನ್ನು ನಿನ್ನ ಹೆಸರಿನಿಂದ ಆಶೀರ್ವದಿಸುವರು ಎಂಬರ್ಥವನ್ನೂ ಇದು ಕೊಡಬಲ್ಲದು] ಮಾಡುವೆನು.
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.
ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.
ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.
ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.
ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.
‘ಈಕೆ ನನಗೆ ತಂಗಿಯಾಗಬೇಕು’ ಎಂದು ಯಾಕೆ ಹೇಳಿದೆ? ನೀನು ಹೀಗೆ ಹೇಳಿದ್ದರಿಂದ ನಾನು ಆಕೆಯನ್ನು ನನ್ನ ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆ. ಆದರೆ ಈಗ ನಾನು ನಿನ್ನ ಹೆಂಡತಿಯನ್ನು ಮತ್ತೆ ನಿನಗೇ ಕೊಡುತ್ತೇನೆ. ನೀನು ಆಕೆಯನ್ನು ನಿನ್ನೊಂದಿಗೆ ಕರೆದುಕೊಂಡು ಹೊರಟುಹೋಗು” ಎಂದು ಹೇಳಿದನು.
ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಆ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು.