ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು.
ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.
ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.
ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.
ಇಷ್ಮಾಯೇಲನು ಕಾಡುಕತ್ತೆಯಂತೆ ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು; ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.” ಎಂದು ಹೇಳಿ ಹೊರಟುಹೋದನು.
ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’ ” ಎಂದು ಹೆಸರಿಟ್ಟಳು.