1
|
ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು. |
2
|
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವುದಾಗಿ ವಾಗ್ದಾನ ಮಾಡುತ್ತೇನೆ” ಎಂದು ಹೇಳಿದನು. |
3
|
ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ, |
4
|
“ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ: |
5
|
‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ. |
6
|
ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು. |
7
|
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು. |
8
|
ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು. |
9
|
ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು. |
10
|
ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು. |
11
|
[This verse may not be a part of this translation] |
12
|
[This verse may not be a part of this translation] |
13
|
[This verse may not be a part of this translation] |
14
|
[This verse may not be a part of this translation] |
15
|
ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರಾ. |
16
|
ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು. |
17
|
ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಾಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು. |
18
|
ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಮಾಯೇಲನೇ ನಿನ್ನ ಆಶೀರ್ವಾದವನ್ನು ಹೊಂದಿಕೊಂಡು ಜೀವಿಸಬಾರದೇಕೆ?’ ಎಂದು ಕೇಳಿದನು. |
19
|
ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, “ಇಸಾಕ” ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. |
20
|
“ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು. |
21
|
ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು. |
22
|
ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು. |
23
|
ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು. |
24
|
ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು. |
25
|
ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು. |
26
|
ಅಬ್ರಹಾಮನಿಗೂ ಅವನ ಮಗನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು. |
27
|
ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು. |
Genesis 17:7 Kannada Language Bible Words basic statistical display
COMING SOON ...