1
|
ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು. |
2
|
ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು. |
3
|
ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು. |
4
|
ಅಬೀಮೆಲೆಕನು ಇನ್ನೂ ಸಾರಳೊಡನೆ ಮಲಗಿಕೊಂಡಿರಲಿಲ್ಲ. ಆದ್ದರಿಂದ ಅಬೀಮೆಲೆಕನು, “ಸ್ವಾಮಿ, ನಾನು ತಪ್ಪಿತಸ್ಥನಲ್ಲ. ಒಬ್ಬ ನಿರಪರಾಧಿಯನ್ನು ನೀನು ಕೊಲ್ಲುವೆಯಾ? |
5
|
‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು. |
6
|
ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ. |
7
|
ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. |
8
|
ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು. |
9
|
ಆಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, “ನೀನು ನಮಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು. |
10
|
ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?” ಎಂದು ಕೇಳಿದನು. |
11
|
ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ. |
12
|
ಆಕೆ ನನ್ನ ಹೆಂಡತಿಯೇನೊ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ. |
13
|
ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು”‘ ಎಂದನು. |
14
|
ಆಗನಡೆದ ಸಂಗತಿಯನ್ನೆಲ್ಲ ಅರ್ಥಮಾಡಿಕೊಂಡು ಸಾರಳನ್ನು ಅಬ್ರಹಾಮನಿಗೆ ಒಪ್ಪಿಸಿದನು; ಅಲ್ಲದೆ ಕುರಿಗಳನ್ನೂ ದನಗಳನ್ನೂ ಸೇವಕಸೇವಕಿಯರನ್ನೂ ಕೊಟ್ಟನು. |
15
|
ಅಬೀಮೆಲೆಕನು ಅಬ್ರಹಾಮನಿಗೆ, “ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು” ಎಂದು ಹೇಳಿದನು. |
16
|
ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು. |
17
|
[This verse may not be a part of this translation] |
18
|
[This verse may not be a part of this translation] |
Genesis 20:2 Kannada Language Bible Words basic statistical display
COMING SOON ...