English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Genesis Chapters

Genesis 22 Verses

1 ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.
2 ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.
3 ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.
4 ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿ ಅವನಿಗೆ ಕಾಣಿಸಿತು.
5 ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.
6 ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವುದಕ್ಕಾಗಿ ಆ ಸ್ಥಳಕ್ಕೆ ಹೊರಟರು.
7 ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.
8 ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು
9 ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
10 ಬಳಿಕ ಅವನು ತನ್ನ ಮಗನನ್ನು ವಧಿಸಲು ಕತ್ತಿಯನ್ನು ಮೇಲೆತ್ತಲು,
11 ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
12 ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.
13 ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.
14 ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.
15 ಯೆಹೋವನ ದೂತನು ಆಕಾಶದಿಂದ ಅಬ್ರಹಾಮನನ್ನು ಎರಡನೆ ಸಲ ಕರೆದು ಅವನಿಗೆ,
16 “ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:
17 ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
18 ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.
19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.
20 ಈ ಸಂಗತಿಗಳೆಲ್ಲ ನಡೆದ ಮೇಲೆ ಅಬ್ರಹಾಮನಿಗೆ ಒಂದು ಸಂದೇಶ ಬಂದಿತು. ಆ ಸಂದೇಶವು ಹೀಗಿತ್ತು: “ನಿನ್ನ ತಮ್ಮನಾದ ನಾಹೋರ ಮತ್ತು ಅವನ ಹೆಂಡತಿಯಾದ ಮಿಲ್ಕ ಈಗ ಮಕ್ಕಳನ್ನು ಹೊಂದಿದ್ದಾರೆ.
21 ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೂವೇಲ್. ಇವನು ಅರಾಮನ ತಂದೆ.
22 ಇವರಲ್ಲದೆ ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರು ಸಹ ಇದ್ದಾರೆ.”
23 ಬೆತೂವೇಲನು ರೆಬೆಕ್ಕಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ.
24 ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ.
×

Alert

×