“ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.
ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.
ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.
“ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.
(17-18) ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.