1
|
ಅಬ್ರಹಾಮನು ಮತ್ತೆ ಮದುವೆಯಾದನು. ಅವನ ಹೊಸ ಹೆಂಡತಿಯ ಹೆಸರು ಕೆಟೂರ. |
2
|
ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು. |
3
|
ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು. |
4
|
ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ಹನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು. |
5
|
[This verse may not be a part of this translation] |
6
|
[This verse may not be a part of this translation] |
7
|
ಅಬ್ರಹಾಮನು ನೂರೆಪ್ಪತ್ತೈದು ವರ್ಷ ಜೀವಿಸಿದನು. |
8
|
ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು. |
9
|
ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ. |
10
|
ಅಬ್ರಹಾಮನು ಹಿತ್ತಿಯರಿಂದ ಕೊಂಡುಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿಮಾಡಲಾಯಿತು. |
11
|
ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು. |
12
|
ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.) |
13
|
ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ಬಯೇಲ್, ಮಿಬ್ಸಾಮ್, |
15
|
ಹದದ್, ತೇಮಾ, ಯಟೂರ್, ನಾಫೀಷ್ ಮತ್ತು ಕೇದ್ಮಾ. |
16
|
ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡುಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು. |
17
|
ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತ ನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು. |
18
|
ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು. |
19
|
ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು. |
20
|
ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ. |
21
|
ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು. |
22
|
ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು. |
23
|
ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು. |
24
|
ದಿನ ತುಂಬಿದ ಮೇಲೆ ರೆಬೆಕ್ಕಳು ಅವಳಿಜವಳಿ ಮಕ್ಕಳನ್ನು ಹೆತ್ತಳು. |
25
|
ಮೊದಲನೆಯ ಮಗುವು ಕೆಂಪಗಿತ್ತು. ಅವನ ಚರ್ಮವು ಕೂದಲಿನ ಉಡುಪಿನಂತಿತ್ತು. ಆದ್ದರಿಂದ ಅವನಿಗೆ “ಏಸಾವ್” ಎಂದು ಹೆಸರಿಡಲಾಯಿತು. |
26
|
ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು. |
27
|
ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು. |
28
|
ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. |
29
|
ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು. |
30
|
ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.) |
31
|
ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು. |
32
|
ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು. |
33
|
ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು. |
34
|
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು. |
Genesis 25:24 Kannada Language Bible Words basic statistical display
COMING SOON ...