ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು.
ಯಾಕೋಬನು ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು.
ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.
ಆಮೇಲೆ ಲೇಯಾ ಮತ್ತು ಅವಳೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು. ತರುವಾಯ, ರಾಹೇಲಳು ಮತ್ತು ಯೋಸೇಫನು ಏಸಾವನ ಬಳಿಗೆ ಹೋಗಿ ತಲೆಬಾಗಿ ನಮಸ್ಕರಿಸಿದರು.
ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು.
ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.
ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.
ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತುಹೋಗುತ್ತವೆ.
ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.
ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.
ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.