1
|
ದೀನಳು ಲೇಯಾ ಮತ್ತು ಯಾಕೋಬನ ಮಗಳು. ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡಲು ಹೊರಗೆ ಹೋದಳು. |
2
|
ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು. |
3
|
ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು. |
4
|
ಶೆಕೆಮನು ತನ್ನ ತಂದೆಗೆ, “ದಯವಿಟ್ಟು ಈ ಹುಡುಗಿಯನ್ನು ನನಗೆ ಮದುವೆಮಾಡಿಸು” ಎಂದು ಕೇಳಿಕೊಂಡನು. |
5
|
ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ. |
6
|
ಆ ಸಮಯದಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನೊಂದಿಗೆ ಮಾತಾಡಲು ಬಂದನು. |
7
|
ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು. |
8
|
ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ. |
9
|
ಈ ಮದುವೆಯು ನಮಗಾಗಿರುವ ಒಂದು ವಿಶೇಷ ಒಪ್ಪಂದವನ್ನು ತೋರಿಸುತ್ತದೆ. ಅದೇನಂದರೆ, ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. |
10
|
ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು. |
11
|
ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ. |
12
|
ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು. |
13
|
ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು. |
14
|
ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕೆಂದರೆ ನಿನಗಿನ್ನೂ ಸುನ್ನತಿಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗುವುದು ತಪ್ಪಾಗುತ್ತದೆ. |
15
|
ಆದರೆ ನೀನು ಮತ್ತು ನಿಮ್ಮ ಪಟ್ಟಣದಲ್ಲಿರುವ ಪ್ರತಿಯೊಬ್ಬ ಗಂಡಸು ನಮ್ಮಂತೆ ಸುನ್ನತಿ ಮಾಡಿಸಿಕೊಂಡರೆ ನೀನು ಆಕೆಯನ್ನು ಮದುವೆಯಾಗಬಹುದು. |
16
|
ಆಮೇಲೆ ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ಆಗ ನಾವು ಒಂದೇ ಜನಾಂಗವಾಗುವೆವು. |
17
|
ಆದರೆ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಾವು ದೀನಳನ್ನು ಕರೆದುಕೊಂಡು ಹೋಗುತ್ತೇವೆ” ಎಂದು ಹೇಳಿದರು. |
18
|
ಅವರು ಹೇಳಿದ್ದು ಹಮೋರನಿಗೂ ಶೆಕೆಮನಿಗೂ ಒಳ್ಳೆಯದೆಂದು ತೋಚಿತು. |
19
|
ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು. |
20
|
ಹಮೋರನು ಮತ್ತು ಶೆಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸರೊಂದಿಗೆ ಮಾತಾಡಿ, |
21
|
“ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ. |
22
|
ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು. |
23
|
ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು. |
24
|
ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು. |
25
|
ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು. |
26
|
ದೀನಳ ಅಣ್ಣಂದಿರಾದ ಸಿಮೆಯೋನನು ಮತ್ತು ಲೇವಿಯು ಹಮೋರನನ್ನೂ ಅವನ ಮಗನಾದ ಶೆಕೆಮನನ್ನೂ ಕೊಂದುಹಾಕಿ ದೀನಳನ್ನು ಶೆಕಮನ ಮನೆಯಿಂದ ಕರೆದುಕೊಂಡು ಬಂದರು. |
27
|
ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು. |
28
|
ಹೀಗೆ ದೀನಳ ಅಣ್ಣಂದಿರು ಅವರ ದನಕುರಿಗಳನ್ನೂ ಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು. |
29
|
ಅವರ ಹೆಂಡತಿಯರನ್ನೂ ಮಕ್ಕಳನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ದೋಚಿಕೊಂಡರು. |
30
|
ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು. |
31
|
ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೆ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು. |
Genesis 34:4 Kannada Language Bible Words basic statistical display
COMING SOON ...