Bible Languages

Indian Language Bible Word Collections

Bible Versions

Books

Genesis Chapters

Genesis 35 Verses

Bible Versions

Books

Genesis Chapters

Genesis 35 Verses

1 ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.
2 ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.
3 ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.
4 ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.
5 ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.
6 ಯಾಕೋಬನು ಮತ್ತು ಅವರ ಜನರು ಲೂಜಿಗೆ ಹೋದರು. ಈಗ ಲೂಜನ್ನು ‘ಬೇತೇಲ್’ ಎಂದು ಕರೆಯುತ್ತಾರೆ. ಅದು ಕಾನಾನ್ ದೇಶದಲ್ಲಿದೆ.
7 ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.
8 ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
9 ಯಾಕೋಬನು ಪದ್ದನ್‌ಅರಾಮಿನಿಂದ ಹಿಂತಿರುಗಿ ಬಂದಾಗ, ದೇವರು ಅವನಿಗೆ ಮತ್ತೆ ಕಾಣಿಸಿಕೊಂಡು ಅವನನ್ನು ಆಶೀರ್ವದಿಸಿದನು.
10 ದೇವರು ಯಾಕೋಬನಿಗೆ, “ನಿನ್ನ ಹೆಸರು ಯಾಕೋಬ. ಆದರೆ ನಾನು ಆ ಹೆಸರನ್ನು ಬದಲಾಯಿಸುವೆನು. ಇನ್ನು ಮುಂದೆ ನೀನು ಯಾಕೋಬನೆಂದು ಕರೆಸಿಕೊಳ್ಳುವುದಿಲ್ಲ. ನಿನ್ನ ಹೊಸ ಹೆಸರು ‘ಇಸ್ರೇಲ್’ ಎಂದು ಹೇಳಿ ಅವನಿಗೆ ‘ಇಸ್ರೇಲ್’ ಎಂದು ಹೆಸರಿಟ್ಟನು.
11 ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.
12 ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.
13 ಆಮೇಲೆ ದೇವರು ಆ ಸ್ಥಳದಿಂದ ಹೊರಟುಹೋದನು.
14 [This verse may not be a part of this translation]
15 [This verse may not be a part of this translation]
16 ಯಾಕೋಬನು ಮತ್ತು ಅವನ ಜನರು ಬೇತೇಲಿನಿಂದ ಹೊರಟು ಬೇತ್ಲೆಹೇಮೆಂಬ ಎಫ್ರಾತೂರಿಗೆ ಬರುವುದಕ್ಕಿಂತ ಸ್ವಲ್ಪಮುಂಚೆ ರಾಹೇಲಳಿಗೆ ಹೆರಿಗೆ ಕಾಲ ಬಂದಿತು.
17 ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.
18 ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.
19 ರಾಹೇಲಳನ್ನು ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.
20 ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ.
21 ಆಮೇಲೆ ಇಸ್ರೇಲನು ತನ್ನ ಪ್ರಯಾಣವನ್ನು ಮುಂದುವರೆಸಿ ‘ಮಿಗ್ದಲ್‌ಏದರ್’ ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು.
22 ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
23 ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.
24 ರಾಹೇಲಳ ಗಂಡುಮಕ್ಕಳು: ಯೋಸೇಫ ಮತ್ತು ಬೆನ್ಯಾಮೀನ್.
25 ಬಿಲ್ಹಳು ರಾಹೇಲಳ ದಾಸಿ. ಬಿಲ್ಹಳ ಗಂಡುಮಕ್ಕಳು: ದಾನ್ ಮತ್ತು ನಫ್ತಾಲಿ.
26 ಜಿಲ್ಪಳು ಲೇಯಳ ದಾಸಿ. ಜಿಲ್ಪಳ ಗಂಡುಮಕ್ಕಳು: ಗಾದ್ ಮತ್ತು ಆಶೇರ್. ಇವರೆಲ್ಲರು ಯಾಕೋಬನಿಗೆ ಪದ್ದನ್‌ಅರಾಮಿನಲ್ಲಿ ಹುಟ್ಟಿದ ಗಂಡುಮಕ್ಕಳು.
27 ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೆಬ್ರೋನೆಂಬ ಕಿರ್ಯತರ್ಬದಲ್ಲಿದ್ದ ಮಮ್ರೆಗೆ ಬಂದನು. ಅಬ್ರಹಾಮನು ಮತ್ತು ಇಸಾಕನು ವಾಸವಾಗಿದ್ದದ್ದು ಇಲ್ಲೇ.
28 ಇಸಾಕನು ನೂರೆಂಭತ್ತು ವರ್ಷಗಳವರೆಗೆ ಜೀವಿಸಿದನು.
29 ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.

Genesis 35:17 Kannada Language Bible Words basic statistical display

COMING SOON ...

×

Alert

×