1
|
ಎದೋಮನೆಂಬ ಏಸಾವನ ಕುಟುಂಬ ಚರಿತ್ರೆ: |
2
|
ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೊಲೀಬಾಮ; |
3
|
ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್. |
4
|
ಏಸಾವನಿಗೆ ಮತ್ತು ಆದಾಳಿಗೆ ಎಲೀಫಜನೆಂಬ ಮಗನಿದ್ದನು. ಬಾಸೆಮತಳಿಗೆ ರೆಗೂವೇಲನೆಂಬ ಮಗನಿದ್ದನು. |
5
|
ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು. |
6
|
[This verse may not be a part of this translation] |
7
|
[This verse may not be a part of this translation] |
8
|
[This verse may not be a part of this translation] |
9
|
ಏಸಾವನು ಎದೋಮ್ ಜನರ ತಂದೆ. ಸೇಯೀರ್ ದೇಶದಲ್ಲಿ ವಾಸವಾಗಿದ್ದ ಏಸಾವನ ಕುಟುಂಬದವರ ಹೆಸರುಗಳು: |
10
|
ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು. |
11
|
ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್. |
12
|
ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು. |
13
|
ರೆಗೂವೇಲನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು. |
14
|
ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ; (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ. |
15
|
ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್, |
16
|
ಕೋರಹ, ಗತಾಮ ಮತ್ತು ಅಮಾಲೇಕ. ಈ ಕುಲಪತಿಗಳು ಏಸಾವನ ಹೆಂಡತಿಯಾದ ಆದಾಳ ಸಂತತಿಯವರು. |
17
|
ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು. |
18
|
ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು. |
19
|
ಈ ಕುಟುಂಬಗಳಿಗೆಲ್ಲಾ ಏಸಾವನೇ ಮೂಲಪುರುಷ. |
20
|
ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡುಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, |
21
|
ದೀಶೋನ್, ಏಚೆರ್ ಮತ್ತು ದೀಶಾನ್, ಆ ಗಂಡುಮಕ್ಕಳು ಕುಲಪತಿಗಳಾಗಿದ್ದರು. |
22
|
ಲೋಟಾನನು ಹೋರಿ, ಹೇಮಾಮ್ ಎಂಬುವರ ತಂದೆ. (ತಿಮ್ನಳು ಲೋಟಾನನ ತಂಗಿ.) |
23
|
ಶೋಬಾಲನು ಅಲ್ಪಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್ ಎಂಬವರ ತಂದೆ. |
24
|
ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.) |
25
|
ಅನಾಹನು ದೀಶೋನ್ ಮತ್ತು ಓಹೊಲೀಬಾಮಳ ತಂದೆ. |
26
|
ದಿಶೋನನಿಗೆ ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬ ನಾಲ್ಕ ಮಂದಿ ಗಂಡುಮಕ್ಕಳಿದ್ದರು. |
27
|
ಏಚೆರನಿಗೆ ಬಿಲ್ಹಾನ್, ಚಾವಾನ್ ಮತ್ತು ಅಕಾನ್ ಎಂಬ ಮೂರು ಮಂದಿ ಗಂಡುಮಕ್ಕಳಿದ್ದರು. |
28
|
ದೀಶಾನನಿಗೆ ಊಚ್ ಮತ್ತು ಅರಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. |
29
|
ಹೋರಿಯರ ಕುಟುಂಬಗಳ ನಾಯಕರುಗಳ ಹೆಸರುಗಳು ಇಂತಿವೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, |
30
|
ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ. |
31
|
ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು. |
32
|
ಬೆಯೋರನ ಮಗನಾದ ಬೆಲಗನು ಎದೋಮಿನ ರಾಜನಾಗಿದ್ದನು. ಅವನು ದಿನ್ಹಾಬಾ ನಗರವನ್ನು ಆಳಿದನು. |
33
|
ಬೆಲಗನು ಸತ್ತಮೇಲೆ, ಯೋಬಾಬನು ರಾಜನಾದನು. ಯೋಬಾಬನು ಬೊಚ್ರದವನಾದ ಚೆರಹನ ಮಗನು. |
34
|
ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು. |
35
|
ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು. |
36
|
ಹದದನು ಸತ್ತಮೇಲೆ, ಸಮ್ಲಾಹನು ಆ ದೇಶವನ್ನು ಆಳಿದನು; ಸಮ್ಲಾಹನು ಮಸ್ರೇಕದವನು. |
37
|
ಸಮ್ಲಾಹನು ಸತ್ತಮೇಲೆ ಸೌಲನು ಆ ದೇಶವನ್ನು ಆಳಿದನು. ಸೌಲನು ಯೂಫ್ರೇಟೀಸ್ ನದೀತೀರದಲ್ಲಿರುವ ರೆಹೋಬೋತೂರಿನವನು. |
38
|
ಸೌಲನು ಸತ್ತಮೇಲೆ ಆ ದೇಶವನ್ನು ಬಾಳ್ಹಾನಾನನು ಆಳಿದನು. ಬಾಳ್ಹಾನಾನನು ಅಕ್ಬೋರನ ಮಗನು. |
39
|
ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.) |
40
|
[This verse may not be a part of this translation] |
41
|
[This verse may not be a part of this translation] |
42
|
[This verse may not be a part of this translation] |
43
|
[This verse may not be a part of this translation] |
Genesis 36:29 Kannada Language Bible Words basic statistical display
COMING SOON ...