ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.
ಇಸ್ರೇಲನು ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು.
ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.
ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.
ಯೋಸೇಫನು ತನ್ನ ತಂದೆಗೂ ಸಹ ಈ ಕನಸಿನ ಬಗ್ಗೆ ತಿಳಿಸಿದನು. ಆದರೆ ಅವನ ತಂದೆ ಅವನನ್ನು ಗದರಿಸಿ, “ಇದೆಂಥಾ ಕನಸು? ನಾನೂ ನಿನ್ನ ತಾಯಿಯೂ ಮತ್ತು ನಿನ್ನ ಸಹೋದರರೂ ನಿನಗೆ ಅಡ್ಡಬೀಳುತ್ತೇವೆಂದು ನಂಬುತ್ತೀಯೋ?” ಎಂದು ಕೇಳಿದನು.
ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.
ಅದಕ್ಕೆ ಅವನು, “ಅವರು ಇಲ್ಲಿಂದ ಹೊರಟುಹೋದರು. ದೋತಾನಿಗೆ ಹೋಗೋಣ ಎಂದು ಅವರು ಮಾತಾಡಿಕೊಳ್ಳುವುದನ್ನು ನಾನು ಕೇಳಿದೆ” ಎಂದು ಹೇಳಿದನು. ಆದ್ದರಿಂದ ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.
ಅರಣ್ಯದಲ್ಲಿರುವ ಬರಿದಾದ ಬಾವಿಗೆ ಅವನನ್ನು ನೂಕಿಬಿಡಿ; ಆದರೆ ಅವನಿಗೆ ನೋವು ಮಾಡಬೇಡಿ” ಎಂದು ಹೇಳಿದನು. ತರುವಾಯ ಯೋಸೇಫನನ್ನು ಬಾವಿಯಿಂದ ಮೇಲೆತ್ತಿ ತಂದೆಗೆ ಅವನನ್ನು ಒಪ್ಪಿಸಬೇಕೆಂಬುದೇ ರೂಬೇನನ ಅಪೇಕ್ಷೆಯಾಗಿತ್ತು.
ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.
ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.
ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.
ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.
ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.