ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.
ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” [*ನೀನು … ಕೊಳ್ಳಬೇಕು ಅಥವಾ “ನೀನು ಒಳ್ಳೆಯದನ್ನು ಮಾಡದಿದ್ದರೆ ಪಾಪವು ಬಾಗಿಲ ಬಳಿಯಲ್ಲಿಯೇ ಹೊಂಚು ಹಾಕಿಕೊಂಡಿರುತ್ತದೆ. ಅದಕ್ಕೆ ನೀನು ಬೇಕಾಗಿರುವೆ. ಆದರೆ ನೀನು ಅದರ ಮೇಲೆ ದೊರೆತನ ಮಾಡಬೇಕು.”] ಎಂದು ಹೇಳಿದನು.
ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.
ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.
ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.
ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.
ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.
ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು, ಆಕೆಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ ಎಂದು ಹೆಸರಿಟ್ಟಳು.
ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು. [†ಜನರು … ಇಡಲಾರಂಭಿಸಿದರು ಅಕ್ಷರಶಃ, “ಜನರು ದೇವರನ್ನು ಯೆಹೋವ ಎಂದು ಕರೆಯಲಾರಂಭಿಸಿದರು.”]