1
|
ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು. |
2
|
ದೇವರು ಅವರನ್ನು ಗಂಡುಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು. |
3
|
ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು. |
4
|
ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
5
|
ಹೀಗೆ ಆದಾಮನು ಒಟ್ಟು 930 ವರ್ಷ ಜೀವಿಸಿ ಮರಣಹೊಂದಿದನು. |
6
|
ಸೇತನು 105 ವರ್ಷದವನಾದಾಗ ಎನೋಷ್ ಎಂಬ ಮಗನನ್ನು ಪಡೆದನು. |
7
|
ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
8
|
ಹೀಗೆ ಸೇತನು ಒಟ್ಟು 912 ವರ್ಷ ಜೀವಿಸಿ ಮರಣಹೊಂದಿದನು. |
9
|
ಎನೋಷನು 90 ವರ್ಷದವನಾದಾಗ ಕೇನಾನ ಎಂಬ ಮಗನನ್ನು ಪಡೆದನು. |
10
|
ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
11
|
ಹೀಗೆ ಎನೋಷನು ಒಟ್ಟು 905 ವರ್ಷ ಜೀವಿಸಿ ಮರಣಹೊಂದಿದನು. |
12
|
ಕೇನಾನನು 70 ವರ್ಷದವನಾದಾಗ ಅವನು ಮಹಲಲೇಲ ಎಂಬ ಮಗನನ್ನು ಪಡೆದನು. |
13
|
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
14
|
ಹೀಗೆ ಕೇನಾನನು ಒಟ್ಟು 910 ವರ್ಷ ಜೀವಿಸಿ ಮರಣಹೊಂದಿದನು. |
15
|
ಮಹಲಲೇಲನು 65 ವರ್ಷದವನಾದಾಗ ಯೆರೆದ ಎಂಬ ಮಗನನ್ನು ಪಡೆದನು. |
16
|
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
17
|
ಹೀಗೆ ಮಹಲಲೇಲನು ಒಟ್ಟು 895 ವರ್ಷ ಜೀವಿಸಿ ಮರಣಹೊಂದಿದನು. |
18
|
ಯೆರೆದನು 162 ವರ್ಷದವನಾದಾಗ ಹನೋಕ ಎಂಬ ಮಗನನ್ನು ಪಡೆದನು. |
19
|
ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
20
|
ಹೀಗೆ ಯೆರೆದನು ಒಟ್ಟು 962 ವರ್ಷ ಜೀವಿಸಿ ಮರಣಹೊಂದಿದನು. |
21
|
ಹನೋಕನು 65 ವರ್ಷದವನಾದಾಗ ಮೆತೂಷೆಲಹ ಎಂಬ ಮಗನನ್ನು ಪಡೆದನು. |
22
|
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
23
|
ಹೀಗೆ ಹನೋಕನು ಒಟ್ಟು 365 ವರ್ಷ ಜೀವಿಸಿದನು. |
24
|
ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು. |
25
|
ಮೆತೂಷೆಲಹನು 187 ವರ್ಷದವನಾದಾಗ ಲೆಮೆಕ ಎಂಬ ಮಗನನ್ನು ಪಡೆದನು. |
26
|
ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
27
|
ಹೀಗೆ ಮೆತೂಷೆಲಹನು ಒಟ್ಟು 969 ವರ್ಷ ಜೀವಿಸಿ ಮರಣಹೊಂದಿದನು. |
28
|
ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. |
29
|
ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು. |
30
|
ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು. |
31
|
ಹೀಗೆ ಲೆಮೆಕನು ಒಟ್ಟು 777 ವರ್ಷ ಜೀವಿಸಿ ಮರಣಹೊಂದಿದನು. |
32
|
ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು. |
Genesis 5:15 Kannada Language Bible Words basic statistical display
COMING SOON ...