1
|
ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದರು. |
2
|
[This verse may not be a part of this translation] |
3
|
[This verse may not be a part of this translation] |
4
|
[This verse may not be a part of this translation] |
5
|
ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು. |
6
|
ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು. |
7
|
ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು. |
8
|
ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ. |
9
|
ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು. |
10
|
ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್. |
11
|
[This verse may not be a part of this translation] |
12
|
[This verse may not be a part of this translation] |
13
|
ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು. |
14
|
ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು. |
15
|
“ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು. |
16
|
ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ. |
17
|
“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು. |
18
|
ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ. |
19
|
ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು. |
20
|
ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ. |
21
|
ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು. |
22
|
ದೇವರು ಆಜ್ಞಾಪಿಸಿದಂತೆಯೇ ನೋಹನು ಮಾಡಿದನು. |
Genesis 6:5 Kannada Language Bible Words basic statistical display
COMING SOON ...