1
|
ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು. |
2
|
ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು ) ತೆಗೆದುಕೊ. |
3
|
ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಉಳಿದ ಜೀವಿಗಳೆಲ್ಲ ನಾಶವಾದಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ. |
4
|
ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು. |
5
|
ಯೆಹೋವನು ಆಜ್ಞಾಪಿಸಿದ್ದನ್ನೆಲ್ಲ ನೋಹನು ಮಾಡಿದನು. |
6
|
ಮಳೆಯು ಆರಂಭವಾದಾಗ ನೋಹನ ವಯಸ್ಸು ಆರುನೂರು ವರ್ಷ. |
7
|
ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಹೆಂಡತಿ, ತನ್ನ ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯೊಳಗೆ ಹೋದನು. |
8
|
ಎಲ್ಲಾ ಶುದ್ಧಪ್ರಾಣಿಗಳು, ಭೂಮಿಯ ಮೇಲಿರುವ ಇತರ ಎಲ್ಲಾ ಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ |
9
|
ನೋಹನೊಂದಿಗೆ ನಾವೆಯೊಳಗೆ ಹೋದವು. ದೇವರ ಆಜ್ಞೆಯಂತೆ ಈ ಪ್ರಾಣಿಗಳು ಜೋಡಿಜೋಡಿಯಾಗಿ ನಾವೆಯೊಳಗೆ ಹೋದವು. |
10
|
ಏಳು ದಿನಗಳ ನಂತರ ಜಲಪ್ರಳಯ ಪ್ರಾರಂಭವಾಯಿತು. ಭೂಮಿಯ ಮೇಲೆ ಮಳೆ ಸುರಿಯತೊಡಗಿತು. |
11
|
[This verse may not be a part of this translation] |
12
|
[This verse may not be a part of this translation] |
13
|
[This verse may not be a part of this translation] |
14
|
ಅವರು ನಾವೆಯೊಳಗೆ ಇದ್ದರು. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು, ಪ್ರತಿಯೊಂದು ಬಗೆಯ ಪಶುಗಳು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿಗಳು ಮತ್ತು ಪ್ರತಿಯೊಂದು ಬಗೆಯ ಪಕ್ಷಿಗಳು ನಾವೆಯೊಳಗೆ ಇದ್ದವು. |
15
|
ಉಸಿರಾಡುವ ಪ್ರತಿಯೊಂದು ಬಗೆಯ ಪ್ರಾಣಿಗಳು ತಮ್ಮತಮ್ಮ ಜಾತಿಗನುಸಾರವಾಗಿ ಎರಡೆರಡಾಗಿ ಬಂದವು. |
16
|
ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು. |
17
|
ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು. |
18
|
ನೀರು ಇನ್ನೂ ಮೇಲೇರತೊಡಗಿದ್ದರಿಂದ ನಾವೆಯೂ ಭೂಮಿಯಿಂದ ಬಹು ಮೇಲೆ ಚಲಿಸತೊಡಗಿತು. |
19
|
ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು. |
20
|
ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು. |
21
|
[This verse may not be a part of this translation] |
22
|
[This verse may not be a part of this translation] |
23
|
ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು. |
24
|
ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು. |
Genesis 7:21 Kannada Language Bible Words basic statistical display
COMING SOON ...