ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.
ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.
ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.
ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.
ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.
ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.
ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.