Bible Languages

Indian Language Bible Word Collections

Bible Versions

Books

Hebrews Chapters

Hebrews 13 Verses

Bible Versions

Books

Hebrews Chapters

Hebrews 13 Verses

1 ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ.
2 ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
3 ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.
4 ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.
5 ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ. ಧರ್ಮೋಪದೇಶ 31:6
6 ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.” ಕೀರ್ತನೆ 118:6
7 ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.
8 ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.
9 ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.
10 ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ.
11 ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ಆ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ.
12 ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು.
13 ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.
14 ಈ ಲೋಕದಲ್ಲಿ ಶಾಶ್ವತವಾಗಿರುವ ನಗರವೇ ಇಲ್ಲ. ಆದರೆ ನಾವು ಮುಂದೆ ಬರುವ ನಗರಕ್ಕಾಗಿ ಕಾಯುತ್ತಿದ್ದೇವೆ.
15 ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
16 ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.
17 ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.
18 ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.
19 ದೇವರು ನನ್ನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸುವಂತೆ ನೀವು ಆತನಲ್ಲಿ ಪ್ರಾರ್ಥನೆಯನ್ನು ಮಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನನಗೆ ಅತ್ಯಗತ್ಯವಾದದ್ದು ಇದೇ.
20 [This verse may not be a part of this translation]
21 [This verse may not be a part of this translation]
22 ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಸಂಗತಿಗಳನ್ನು ಹೇಳಿದೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.
23 ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.
24 ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
25 ದೇವರ ಕೃಪೆಯು ನಿಮ್ಮೆಲ್ಲರೊಂದಿಗಿರಲಿ.

Hebrews 13:1 Kannada Language Bible Words basic statistical display

COMING SOON ...

×

Alert

×