1
|
ಆದುದರಿಂದ ನೀವೆಲ್ಲರೂ ಯೇಸುವನ್ನು ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು. ಪರಿಶುದ್ಧರಾದ ಸಹೋದರ ಸಹೋದರಿಯರೇ, ನಾನು ನಿಮಗೆ ಹೇಳುವುದೇನಂದರೆ, ನೀವು ದೇವರಿಂದ ಕರೆಯಲ್ಪಟ್ಟವರಾಗಿದ್ದೀರಿ. |
2
|
ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು. |
3
|
ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ. |
4
|
ಪ್ರತಿಯೊಂದು ಮನೆಯು ಯಾರಾದರೊಬ್ಬರಿಂದ ಕಟ್ಟಲ್ಪಟ್ಟಿರಬೇಕು. ಆದರೆ ದೇವರು ಎಲ್ಲವನ್ನು ನಿರ್ಮಿಸಿದನು. |
5
|
ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು. |
6
|
ಕ್ರಿಸ್ತನಾದರೊ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ. |
7
|
ಆದುದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, |
8
|
ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು. |
9
|
ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು. |
10
|
ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು. ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ. ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ؆ ಎಂದು ನಾನು ಹೇಳಿದೆನು. |
11
|
ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ؆ ಎಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ 95:7-11 |
12
|
ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ. |
13
|
ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ. |
14
|
ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ. |
15
|
ಪವಿತ್ರ ಗ್ರಂಥವು ಹೇಳುವುದೇನಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ 95:7-8 |
16
|
ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ? |
17
|
ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು. |
18
|
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ? |
19
|
ಆದುದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ. |
Hebrews 3:1 Kannada Language Bible Words basic statistical display
COMING SOON ...