Bible Languages

Indian Language Bible Word Collections

Bible Versions

Books

Hebrews Chapters

Hebrews 5 Verses

Bible Versions

Books

Hebrews Chapters

Hebrews 5 Verses

1 ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.
2 ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ.
3 ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.
4 ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.
5 ಕ್ರಿಸ್ತನೂ ಇದೇ ರೀತಿ ನೇಮಿಸಲ್ಪಟ್ಟನು. ಆತನು ಪ್ರಭಾವದ ಪ್ರಧಾನಯಾಜಕನಾಗಿ ತನ್ನನ್ನು ತಾನೇ ಆರಿಸಿಕೊಳ್ಳಲಿಲ್ಲ. ಆದರೆ ದೇವರು ಆತನನ್ನು ಆರಿಸಿದನು. ದೇವರು ಕ್ರಿಸ್ತನಿಗೆ ಹೀಗೆ ಹೇಳಿದನು: “ನೀನು ನನ್ನ ಮಗನು. ಈ ದಿನ ನಾನು ನಿನ್ನ ತಂದೆಯಾದೆನು.” ಕೀರ್ತನೆ 2:7
6 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ ದೇವರು ಇಂತೆನ್ನುತ್ತಾನೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಪ್ರಧಾನ ಯಾಜಕನಾಗಿರುವೆ.” ಕೀರ್ತನೆ 110:4
7 ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
8 ಆತನು ದೇವರ ಮಗನಾಗಿದ್ದಾನೆ. ಆದರೂ ಹಿಂಸೆಗೊಳಗಾಗಿ, ತಾನು ಅನುಭವಿಸಿದ ಹಿಂಸೆಗಳಿಂದಲೇ ವಿಧೇಯನಾಗಿರುವುದನ್ನು ಕಲಿತುಕೊಂಡನು.
9 ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.
10 ದೇವರು ಆತನನ್ನು ಮೆಲ್ಕಿಜೆದೇಕನಂತೆ ಪ್ರಧಾನ ಯಾಜಕನನ್ನಾಗಿ ಮಾಡಿದನು.
11 ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.
12 ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.
13 ನೀವು ಹಾಲು ಕುಡಿಯುವ ಮಕ್ಕಳಂತಿರುವಿರಿ. ನಿಮಗೆ ಯೋಗ್ಯ ಬೋಧನೆಗಳ ಬಗ್ಗೆ ಏನೂ ತಿಳಿದಿಲ್ಲ.
14 ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.

Hebrews 5:1 Kannada Language Bible Words basic statistical display

COMING SOON ...

×

Alert

×