1
|
ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ ಯೋಥಾವು, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ. |
2
|
ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೋ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.” |
3
|
ಹಾಗೆ ಹೋಶೇಯನು ದಿಬ್ಲಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಒಬ್ಬ ಗಂಡುಮಗನನ್ನು ಹೆತ್ತಳು. |
4
|
ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು. |
5
|
ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.” |
6
|
ಗೋಮೆರಳು ತಿರುಗಿ ಗರ್ಭಿಣಿಯಾಗಿ ಒಬ್ಬ ಮಗಳನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ. |
7
|
ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.” |
8
|
ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾದಳು. ಆಕೆ ಒಬ್ಬ ಗಂಡುಮಗನನ್ನು ಹೆತ್ತಳು. |
9
|
ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು. |
10
|
“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ. |
11
|
“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.” |
Hosea 1:1 Kannada Language Bible Words basic statistical display
COMING SOON ...