“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಬೋಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.
ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.
ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ಎಲ್ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”