1
|
ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ. |
2
|
ಯೆಹೋವನು ಹೇಳುವದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು. |
3
|
ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು. |
4
|
ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. |
5
|
ಹೌದು ಯೆಹೋವನು ಸೈನ್ಯಗಳ ದೇವರಾಗಿದ್ದಾನೆ. ಆತನ ಹೆಸರು ಯೆಹೋವನು. |
6
|
ಆದುದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು. |
7
|
“ಯಾಕೋಬನು ಒಬ್ಬ ವ್ಯಾಪಾರಿ. ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು, |
8
|
ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ. |
9
|
“ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು. |
10
|
ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು. |
11
|
ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ. |
12
|
“ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲ್ ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು. |
13
|
ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು. |
14
|
ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.” |
Hosea 12:12 Kannada Language Bible Words basic statistical display
COMING SOON ...