ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.
“ಯಾಕೋಬನು ಒಬ್ಬ ವ್ಯಾಪಾರಿ. [*ವ್ಯಾಪಾರಿ ಇಸ್ರೇಲರು ಕಾನಾನಿನಲ್ಲಿ ವಾಸವಾಗಿರುವಾಗ ಅಲ್ಲಿಯ ನಿವಾಸಿಗಳ ದುಷ್ಟಮಾರ್ಗಗಳನ್ನು ಅನುಸರಿಸುವರು. ಉದಾ: ಮೋಸದ ತಕ್ಕಡಿ.] ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು,
ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.
ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.
ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”