“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.
ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.
ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.
ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”
ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.
ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”