1
|
ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ. |
2
|
ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದುದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿ ತಿರುಗಿ ಕೊಲೆ ಮಾಡುತ್ತಾರೆ. |
3
|
ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದುದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ. |
4
|
ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ. |
5
|
ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಯೂ ನಿಮ್ಮ ಜೊತೆಗೆ ಬೀಳುವನು ಮತ್ತು ನಾನು ನಿಮ್ಮ ತಾಯಿಯನ್ನು ನಾಶ ಮಾಡುವೆನು. |
6
|
“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದುದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದುದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು. |
7
|
ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚೆಚ್ಚಾಗಿ ಪಾಪ ಮಾಡಿದರು. ಆದುದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು. |
8
|
“ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು. |
9
|
ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು. |
10
|
ಅವರು ತಿನ್ನುವರು ಆದರೆ ಅವರು ತೃಪ್ತಿ ಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು. |
11
|
“ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು. |
12
|
ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ. |
13
|
ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದುದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು. |
14
|
“ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶ ಮಾಡಿಕೊಳ್ಳುತ್ತಾರೆ. |
15
|
“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ. |
16
|
ಇಸ್ರೇಲಿಗೆ ಅನೇಕ ಸಂಗತಿಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹಠಮಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಯೌವನ ಹಸುವಿನಂತಿದೆ. |
17
|
ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದುದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು. |
18
|
“ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚ ಕೊಡುವಂತೆ ಒತ್ತಾಯ ಮಾಡುತ್ತಾರೆ. ಆ ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ. |
19
|
ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.” |
Hosea 4:14 Kannada Language Bible Words basic statistical display
COMING SOON ...