1
|
ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು. |
2
|
ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು. |
3
|
ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.” |
4
|
“ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆ ಹೋಗುವದು. |
5
|
ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು. |
6
|
ಯಾಕಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗ ಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ. |
7
|
ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದು ಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು. |
8
|
ಗಿಲ್ಯಾದು ಕೆಟ್ಟತನವನ್ನು ನಡಿಸುವ ಜನರಿಂದ ಕೂಡಿದ ನಗರವಾಗಿದೆ. ಜನರು ಇತರರನ್ನು ಮೋಸಗೊಳಿಸಿ ಕೊಲೆಮಾಡಿರುತ್ತಾರೆ. |
9
|
ಕಳ್ಳರು ದಾರಿಯಲ್ಲಿ ಹೊಂಚು ಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಟಕಾರ್ಯಗಳನ್ನು ಮಾಡಿರುತ್ತಾರೆ. |
10
|
ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ. |
11
|
ಯೆಹೂದವೇ, ನಿನಗೆ ಸುಗ್ಗೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಹಿಂತಿರುಗಿ ಕರೆತಂದಾಗ ಅದು ಸಂಭವಿಸುವದು. “ನಾನು ಇಸ್ರೇಲನ್ನು ಗುಣಪಡಿಸುವೆನು. |
Hosea 6:1 Kannada Language Bible Words basic statistical display
COMING SOON ...