1
|
ಆಗ ಎಫ್ರಾಯೀಮನು ಪಾಪ ಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು. |
2
|
ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ. |
3
|
ಅವರ ದುಷ್ಟತನವು ಅವರ ಅರಸರನ್ನು ಸಂತಸಗೊಳಿಸುವವು. ಅವರ ಸುಳ್ಳುಗಳು ಅವರ ನಾಯಕರನ್ನು ಸಂತೋಷಪಡಿಸುತ್ತವೆ. |
4
|
ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೊ ಹಾಗಲ್ಲ, ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ. |
5
|
ನಮ್ಮ ಅರಸನ ದಿವಸದಲ್ಲಿ ಅವರು ಬೆಂಕಿಯನ್ನು ಹೆಚ್ಚಿಸುವರು. ಅವರು ಕುಡಿಯುವ ಸಮಾರಂಭವನ್ನು ಏರ್ಪಡಿಸುವರು. ನಾಯಕರು ದ್ರಾಕ್ಷಾರಸದ ಉಷ್ಣದಿಂದ ರೋಗಗ್ರಸ್ತರಾಗಿದ್ದಾರೆ. ಅರಸನು ಜನರೊಂದಿಗೆ ಸೇರಿ ದೇವರನ್ನು ಗೇಲಿಮಾಡಿ ನಗಾಡುವನು. |
6
|
ಜನರು ಗುಪ್ತವಾಗಿ ಯೋಜನೆಯನ್ನು ತಯಾರಿಸುವರು. ಉರಿಯುವ ಒಲೆಯಂತೆ ಅವರ ಹೃದಯವು ಉತ್ಸಾಹಗೊಳ್ಳುವುದು. ಅವರ ಉತ್ಸಾಹವು ರಾತ್ರಿಯೆಲ್ಲಾ ಉರಿಯುವುದು. ಅದು ಮುಂಜಾನೆಯಲ್ಲಿ ಧಗಧಗಿಸುವ ಬೆಂಕಿಯ ಕಾವಿನಂತಿರುವದು. |
7
|
ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.” |
8
|
“ಎಫ್ರಾಯೀಮು ಬೇರೆ ದೇಶಗಳೊಂದಿಗೆ ಬೆರೆತು ಹೋಗುತ್ತದೆ. ಎಫ್ರಾಯೀಮು ತಿರುವಿ ಹಾಕದ ಚಪಾತಿಯಂತಿದೆ. |
9
|
ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಗೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ. |
10
|
ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ. |
11
|
ಹೀಗೆ ಎಫ್ರಾಯೀಮ್ ತಿಳುವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು. |
12
|
ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. |
13
|
ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದುದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು. |
14
|
ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ. |
15
|
ನಾನು ಅವರಿಗೆ ತರಬೇತಿಕೊಟ್ಟು ಅವರ ರಟ್ಟೆಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು. |
16
|
ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು. |
Hosea 7:2 Kannada Language Bible Words basic statistical display
COMING SOON ...