ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದುದರಿಂದ ಅವರು ನಾಶವಾಗುವರು.
ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.
ಜನಾಂಗಗಳ ಮಧ್ಯೆ ಇರುವ ತನ್ನ ಪ್ರೇಮಿಗಳ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟು ಸೇರಿಸುವೆನು. ಆದರೆ ಅದರ ಮೊದಲು ಆ ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.
ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.
ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.