1
|
ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು. |
2
|
ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು. |
3
|
ಜನರು ಸಹಾಯಕ್ಕಾಗಿ ರಾಜನ ಕಡೆಗೆ ನೋಡುವರು. ಅವನು ಹೇಳಿದ್ದನ್ನು ಅವರು ಕೇಳುವರು. |
4
|
ಈಗ ಗಲಿಬಿಲಿಯಲ್ಲಿರುವವರು ವಿಷಯವನ್ನು ಸ್ಪಷ್ಟವಾಗಿ ಮತ್ತು ಕೂಡಲೇ ತಿಳಿದುಕೊಳ್ಳುವರು. ಈಗ ಸ್ಪಷ್ಟವಾಗಿ ಮಾತಾಡಲಾರದ ಜನರು ಸ್ಪಷ್ಟವಾಗಿಯೂ, ಸರಾಗವಾಗಿಯೂ ಮಾತಾಡಶಕ್ತರಾಗುವರು. |
5
|
ದುಷ್ಟರನ್ನು ಮಹಾವ್ಯಕ್ತಿಗಳೆಂದು ಕರೆಯುವದಿಲ್ಲ. ನೀಚನನ್ನು ಘನವಂತನೆಂದು ಕರೆಯುವದಿಲ್ಲ. |
6
|
ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಟಕಾರ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ. |
7
|
ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ. |
8
|
ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು. |
9
|
ಹೆಂಗಸರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು. |
10
|
ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿ ಹಣ್ಣುಗಳೇ ಇರುವದಿಲ್ಲ. |
11
|
ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕ ಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ. |
12
|
ಶೋಕವಸ್ತ್ರಗಳನ್ನು ದುಃಖದಿಂದ ತುಂಬಿದ ನಿಮ್ಮ ಎದೆಗಳ ಮೇಲೆ ಹಾಕಿಕೊಳ್ಳಿ. ನಿಮ್ಮ ಹೊಲಗಳು ನಿಷ್ಪ್ರಯೋಜಕವಾಗಿರುವದಕ್ಕಾಗಿ ಅಳಿರಿ. ನಿಮ್ಮ ದ್ರಾಕ್ಷಿತೋಟವು ಒಳ್ಳೆಯ ಫಲ ಕೊಡುತ್ತಿತ್ತು. ಆದರೆ ಈಗ ತೋಟವು ಬರಿದಾಗಿದೆ. |
13
|
ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣಕ್ಕಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ. |
14
|
ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು. |
15
|
[This verse may not be a part of this translation] |
16
|
[This verse may not be a part of this translation] |
17
|
ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು. |
18
|
ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು. |
19
|
ಇವು ಸಂಭವಿಸುವ ಮೊದಲು ಅರಣ್ಯವು ಆಲಿಕಲ್ಲುಗಳಿಂದ ನಾಶವಾಗಬೇಕು. ಪಟ್ಟಣವು ನೆಲಸಮವಾಗಬೇಕು. |
20
|
ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ. |
Isaiah 32:12 Kannada Language Bible Words basic statistical display
COMING SOON ...