Bible Languages

Indian Language Bible Word Collections

Bible Versions

Books

Isaiah Chapters

Isaiah 39 Verses

Bible Versions

Books

Isaiah Chapters

Isaiah 39 Verses

1 ಆ ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನು ಹಿಜ್ಕೀಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು. ಮೆರೋದಕನಿಗೆ ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ಈ ರೀತಿಯಾಗಿ ಮಾಡಿದನು.
2 ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.
3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು. ಅದಕ್ಕೆ ಹಿಜ್ಕೀಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು.
4 “ನಿನ್ನ ಮನೆಯಲ್ಲಿ ಅವರು ಏನು ನೋಡಿದರು?” ಎಂದು ತಿರುಗಿ ಯೆಶಾಯನು ಪ್ರಶ್ನಿಸಿದನು. “ಅವರು ನನ್ನ ಅರಮನೆಯಲ್ಲಿರುವದನ್ನೆಲ್ಲಾ ನೋಡಿದರು. ನಾನು ನನ್ನ ಐಶ್ವರ್ಯವನ್ನೆಲ್ಲಾ ಅವರಿಗೆ ತೋರಿಸಿದೆನು” ಎಂದು ಹಿಜ್ಕೀಯನು ಉತ್ತರಿಸಿದನು.
5 ಆಗ ಯೆಶಾಯನು ಹಿಜ್ಕೀಯನಿಗೆ, “ಸರ್ವಶಕ್ತನಾದ ಯೆಹೋವನ ಮಾತುಗಳನ್ನು ಕೇಳು:
6 ‘ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ, ಇದು ಸರ್ವಶಕ್ತನಾದ ಯೆಹೋವನ ನುಡಿ.
7 ಬಾಬಿಲೋನಿನವರು ನಿನ್ನ ಗಂಡುಮಕ್ಕಳನ್ನು ತೆಗೆದುಕೊಂಡು ಹೋಗುವರು. ಅವರು ಬಾಬಿಲೋನಿನ ಅರಮನೆಗಳಲ್ಲಿ ಕಂಚುಕಿಯರಾಗಿ ಸೇವೆ ಮಾಡುವರು” ಎಂದು ಹೇಳಿದನು.
8 ಅದಕ್ಕೆ ಹಿಜ್ಕೀಯನು ಯೆಶಾಯನಿಗೆ, “ಯೆಹೋವನ ಮಾತುಗಳು ಒಳ್ಳೆಯವೇ ಸರಿ” ಎಂದು ಹೇಳಿದನು. (ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.)

Isaiah 39:5 Kannada Language Bible Words basic statistical display

COMING SOON ...

×

Alert

×