Bible Languages

Indian Language Bible Word Collections

Bible Versions

Books

Isaiah Chapters

Isaiah 46 Verses

Bible Versions

Books

Isaiah Chapters

Isaiah 46 Verses

1 ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡ ಬೀಳುವವು. ಒಡೆಯನು ಇಂತೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.
2 ಆ ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು.
3 “ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.
4 ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದುದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”
5 “ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ?
6 ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.
7 ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದು ಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
8 “ನೀವು ಪಾಪಮಾಡಿದ್ದೀರಿ. ನೀವು ಈ ವಿಚಾರವಾಗಿ ಮತ್ತೆ ಆಲೋಚಿಸಬೇಕು. ಈ ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ.
9 ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.
10 “ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.
11 ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.
12 “ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.
13 ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”

Isaiah 46:1 Kannada Language Bible Words basic statistical display

COMING SOON ...

×

Alert

×