Bible Languages

Indian Language Bible Word Collections

Bible Versions

Books

Isaiah Chapters

Isaiah 55 Verses

Bible Versions

Books

Isaiah Chapters

Isaiah 55 Verses

1 “ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.
2 ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.
3 ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.”
4 ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, “ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ” ಎಂದು ಪ್ರಮಾಣ ಮಾಡಿದೆ.”
5 ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿ ಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.
6 ಆದುದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.
7 ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.
8 ಯೆಹೋವನು ಹೇಳುವದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
9 ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ; ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ.” ಇದು ಯೆಹೋವನ ನುಡಿ.
10 “ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವ ಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಆ ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಆ ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.
11 ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿ ಮುಗಿಸುವವು.
12 ಆದುದರಿಂದ ನೀವು ಸಂತೋಷದಿಂದ ಹೊರಡುವಿರಿ, ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.
13 ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”

Isaiah 55:1 Kannada Language Bible Words basic statistical display

COMING SOON ...

×

Alert

×