1
|
ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿ ಹೋಗುವವು. |
2
|
ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು. |
3
|
ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ |
4
|
ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ. |
5
|
ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪ ಮಾಡಿದೆವು. ಆದುದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು? |
6
|
ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ. |
7
|
ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ. |
8
|
ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೊ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು. |
9
|
ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ. |
10
|
ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ. |
11
|
ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು. |
12
|
ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ? |
Isaiah 64:12 Kannada Language Bible Words basic statistical display
COMING SOON ...