ಆಹಾಜನು ಯೋಥಾವುನ ಮಗನು. ಯೋಥಾವುನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.
ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.
ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.
“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.
ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.” ’ ”
ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.” ಇಮ್ಮಾನುವೇಲ್: ದೇವರು ನಮ್ಮೊಂದಿಗಿದ್ದಾನೆ
ಯೆಹೋವನು ಹೇಳಿದ್ದೇನೆಂದರೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.
ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.
ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.
“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಂಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.
“ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು
ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ರೋಮವನ್ನೂ ಗಡ್ಡವನ್ನೂ ಬೋಳಿಸಿಬಿಡುವನು.
ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.
ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.”