English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Jeremiah Chapters

Jeremiah 19 Verses

1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು
2 ಬೋಕಿಯ ದ್ವಾರದ [*ಬೋಕಿಯ ದಾಬರ ಒಂದು ದಾಬರದ ಹೆಸರು.] ಸಮೀಪದಲ್ಲಿರುವ ಬೆನ್‌ಹಿನ್ನೊಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.
3 ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.
4 ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
5 ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.
6 ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.
7 ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.
8 ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.
9 ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರನ್ನೊಬ್ಬರು ತಿನ್ನಲು ಪ್ರಾರಂಭಿಸುವರು.’
10 “ಯೆರೆಮೀಯನೇ, ನೀನು ಜನರಿಗೆ ಆ ವಿಷಯಗಳನ್ನು ಹೇಳು. ಅವರು ಗಮನವಿಟ್ಟು ಕೇಳುತ್ತಿರುವಾಗ ಆ ಮಣ್ಣಿನ ಕೊಡವನ್ನು ಒಡೆದುಹಾಕಿ
11 ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.
12 ನಾನು ಈ ಜನರಿಗೂ ಮತ್ತು ಈ ಸ್ಥಳಕ್ಕೂ ಹೀಗೆ ಮಾಡುತ್ತೇನೆ. ನಾನು ಈ ನಗರವನ್ನು ತೋಫೆತಿನಂತೆ ಮಾಡುತ್ತೇನೆ’ ಇದು ಯೆಹೋವನ ನುಡಿ.
13 ‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’ ”
14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನ್ನುದ್ದೇಶಿಸಿ ಹೀಗೆ ಹೇಳಿದನು:
15 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’ ”
×

Alert

×