ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ [*ಒಂದು ಸಾವಿರ ಎತ್ತುಗಳೂ ಅಕ್ಷರಶಃ, “ಐನೂರು ಜೋಡಿ ಎತ್ತುಗಳಿದ್ದವು.”] ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.
ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.
ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.
ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.
ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.
ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.
ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.
“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.