1
|
ಯೋಬನು ತನ್ನ ಮಾತನ್ನು ಮುಂದುವರಿಸಿದನು: “ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು. |
2
|
ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು? |
3
|
ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯನ್ನೇ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ? |
4
|
ದೇವರೇ, ನಿನಗೆ ಮನುಷ್ಯರ ಕಣ್ಣುಗಳಿವೆಯೋ? ಮನುಷ್ಯರು ನೋಡುವಂತೆ ನೀನು ನೋಡುವಿಯೋ? |
5
|
ನಿನ್ನ ಜೀವಿತದ ದಿನಗಳು ನಮ್ಮಂತೆ ಕೊಂಚವಲ್ಲ. ನಿನ್ನ ವರ್ಷಗಳು ಮನುಷ್ಯನ ವರ್ಷಗಳಂತೆ ಕೊಂಚವಲ್ಲ. |
6
|
ನೀನು ನನ್ನ ತಪ್ಪಿಗಾಗಿ ನೋಡುವೆ; ನನ್ನ ಪಾಪಕ್ಕಾಗಿ ಅವಸರದಿಂದ ಹುಡುಕುವೆ. |
7
|
ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು! |
8
|
ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗ ಮನಸ್ಸು ಬೇರೆಮಾಡಿಕೊಂಡು ನೀನು ನನ್ನನ್ನು ನಾಶ ಮಾಡುತ್ತಿರುವೆ! |
9
|
ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ? |
10
|
ನೀನು ನನ್ನನ್ನು ಹಾಲಿನಂತೆ ಸುರಿದುಬಿಟ್ಟಿರುವೆ; ಬೆಣ್ಣೆ ಮಾಡುವವನಂತೆ ನನ್ನನ್ನು ಕಡೆದು ಮಾರ್ಪಡಿಸಿರುವೆ. |
11
|
ನೀನು ನನ್ನನ್ನು ಎಲುಬುಗಳಿಂದಲೂ ನರಗಳಿಂದಲೂ ಹೆಣೆದು ಮಾಂಸಚರ್ಮಗಳಿಂದ ಹೊದಿಸಿರುವೆ. |
12
|
ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ. |
13
|
“ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ: |
14
|
ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ. |
15
|
ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ. |
16
|
ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ. |
17
|
ನನ್ನನ್ನು ದೋಷಿಯೆಂದು ನಿರೂಪಿಸಲು ನಿನ್ನ ಬಳಿಯಲ್ಲಿ ಯಾರಾದರೊಬ್ಬರು ಇದ್ದೇ ಇರುವರು. ನಿನ್ನ ಕೋಪವು ನನಗೆ ವಿರೋಧವಾಗಿ ಹೆಚ್ಚೆಚ್ಚಾಗುವುದು. ನೀನು ನನಗೆ ವಿರೋಧವಾಗಿ ಹೊಸ ಸೈನ್ಯಗಳನ್ನು ತರುವೆ. |
18
|
ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ? ಯಾರೂ ನನ್ನನ್ನು ನೋಡುವುದಕ್ಕಿಂತ ಮೊದಲೇ ನಾನು ಸತ್ತು ಹೋಗಬೇಕಿತ್ತು. |
19
|
ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು. |
20
|
ನನ್ನ ಜೀವಿತವು ಬಹುಮಟ್ಟಿಗೆ ಮುಗಿದು ಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! |
21
|
ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು. |
22
|
ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!” |
Job 10:22 Kannada Language Bible Words basic statistical display
COMING SOON ...