1
|
ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪ ಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ. |
2
|
ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಣಗಿ ಹೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು. |
3
|
ದೇವರೇ, ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನ್ಯಾಯಾಲಯಕ್ಕೆ ಎಳೆದುಕೊಂಡು ಹೋಗುವಿಯಾ? |
4
|
“ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ. |
5
|
ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ. |
6
|
ದೇವರೇ, ನಿನ್ನ ದೃಷ್ಟಿಯನ್ನು ಮನುಷ್ಯನ ಕಡೆಯಿಂದ ತಿರುಗಿಸು. ಅವನನ್ನು ಅವನ ಪಾಡಿಗೆ ಬಿಟ್ಟುಬಿಡು. ಅವನು ಕೂಲಿಯವನಂತಾದರೂ ಜೀವಿಸಲಿ. |
7
|
“ಮರಕ್ಕೆ ನಿರೀಕ್ಷೆಯಿದೆ. ಕಡಿದುಹಾಕಲ್ಪಟ್ಟರೂ ಅದು ಮತ್ತೆ ಚಿಗುರಬಹುದು; ಹೊಸಕವಲುಗಳನ್ನು ಮೊಳೆಯಿಸುತ್ತಲೇ ಇರುವುದು. |
8
|
ಅದರ ಬೇರುಗಳು ನೆಲದೊಳಗೆ ಮುದಿಯಾದರೂ ಅದರ ಬುಡವು ನೆಲದಲ್ಲಿ ಸತ್ತುಹೋದರೂ, |
9
|
ಅದು ನೀರಿನಿಂದ ಮತ್ತೆ ಹೊಸದಾಗಿ ಬೆಳೆಯುವುದು; ಎಳೆಗಿಡದಂತೆ ಕವಲೊಡೆಯುವುದು. |
10
|
ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು. |
11
|
ಸರೋವರದಿಂದ ನೀರು ಕಾಣೆಯಾಗುವವರೆಗೂ ನದಿಯ ನೀರು ಒಣಗಿ ಹೋಗುವವರೆಗೂ |
12
|
ಸತ್ತಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ. |
13
|
“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. |
14
|
ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ. |
15
|
ದೇವರೇ, ನೀನು ನನ್ನನ್ನು ಕರೆದರೆ, ಉತ್ತರ ಕೊಡುವೆನು. ಆಗ ನಿನ್ನ ಸೃಷ್ಟಿಯಾದ ನನ್ನನ್ನು ನೀನು ಇಷ್ಟಪಡುವೆ. |
16
|
ನಾನಿಡುವ ಪ್ರತಿ ಹೆಜ್ಜೆಯನ್ನೂ ನೀನು ಗಮನಿಸುವೆ. ಆದರೆ ನೀನು ನನ್ನ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ. |
17
|
ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ. |
18
|
“ಪರ್ವತವು ಬಿದ್ದು ಕರಗಿ ಹೋಗುವಂತೆ ಬಂಡೆಯು ತನ್ನ ಸ್ಥಳದಿಂದ ಚಲಿಸುವುದು. |
19
|
ಹರಿಯುವ ನೀರು ಕಲ್ಲುಗಳನ್ನು ಸವೆಯಿಸುವಂತೆಯೂ ನೆಲದ ಮೇಲಿನ ಧೂಳನ್ನು ಪ್ರವಾಹದ ನೀರು ಕೊಚ್ಚಿಕೊಂಡು ಹೋಗುವಂತೆಯೂ ದೇವರೇ, ನೀನು ಮನುಷ್ಯನ ನಿರೀಕ್ಷೆಯನ್ನು ನಾಶಮಾಡುವೆ. |
20
|
ನೀನು ಮನುಷ್ಯನನ್ನು ಶಾಶ್ವತವಾಗಿ ಸೋಲಿಸಿ ಬಿಡುವೆ. ಆಗ ಮನುಷ್ಯನು ಇಲ್ಲವಾಗುವನು. ನೀನು ಅವನ ಮುಖವನ್ನು ವಿಕಾರಗೊಳಿಸಿ ಶಾಶ್ವತವಾಗಿ ಕಳುಹಿಸಿಬಿಡುವೆ. |
21
|
ಅವನ ಮಕ್ಕಳಿಗೆ ಸನ್ಮಾನವಾದರೂ ಅವನಿಗೆ ತಿಳಿಯುವುದಿಲ್ಲ; ಅವರಿಗೆ ಅವಮಾನವಾದರೂ ಅವನಿಗೆ ಅದರ ಅರಿವೇ ಇರುವುದಿಲ್ಲ. |
22
|
ಅವನು ತನ್ನ ದೇಹದಲ್ಲಿ ನೋವನ್ನೇ ಅನುಭವಿಸುತ್ತಾ ತನಗೋಸ್ಕರ ಗೋಳಾಡುವನು.” |
Job 14:12 Kannada Language Bible Words basic statistical display
COMING SOON ...