1
|
ಬಳಿಕ ತೇಮಾನಿನ ಎಲೀಫಜನು ಯೋಬನಿಗೆ ಉತ್ತರಿಸಿದನು: |
2
|
“ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ? |
3
|
ಜ್ಞಾನಿಯು ನಿಷ್ಪ್ರಯೋಜಕವಾದ ಮಾತುಗಳಿಂದ ವಾದಿಸುತ್ತಾನೆಂದು ಭಾವಿಸಿಕೊಂಡಿರುವೆಯಾ? |
4
|
ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ. |
5
|
ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ. |
6
|
ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. ಯಾಕಂದರೆ ನಿನ್ನ ಬಾಯ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. ನಿನ್ನ ಸ್ವಂತ ತುಟಿಗಳೇ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ. |
7
|
“ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? ಬೆಟ್ಟಗಳಿಗಿಂತ ಮೊದಲೇ ನೀನು ಹುಟ್ಟಿದಿಯಾ? |
8
|
ದೇವರ ರಹಸ್ಯ ಯೋಜನೆಗಳನ್ನು ಆಲಿಸಿರುವೆಯಾ? ನೀನೊಬ್ಬನೇ ಜ್ಞಾನಿಯೆಂದು ಭಾವಿಸಿಕೊಂಡಿರುವಿಯಾ? |
9
|
ಯೋಬನೇ, ನಿನಗೆ ಗೊತ್ತಿರುವುದೆಲ್ಲಾ ನಮಗೂ ಗೊತ್ತಿದೆ. ನಿನಗೆ ಅರ್ಥವಾಗುವುದೆಲ್ಲಾ ನಮಗೂ ಅರ್ಥವಾಗುತ್ತದೆ. |
10
|
ನಿನ್ನ ತಂದೆಗಿಂತಲೂ ವಯಸ್ಸಾಗಿರುವ, ಕೂದಲು ಬೆಳ್ಳಗಾಗಿರುವ ವೃದ್ಧನು ನಮ್ಮಲ್ಲಿದ್ದಾನೆ. |
11
|
ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ ನಿನಗೆ ಸಾಲುವುದಿಲ್ಲವೇ? |
12
|
ಯೋಬನೇ, ನಿನ್ನ ಆಲೋಚನೆಗಳು ನಿನ್ನನ್ನು ಕೊಂಡೊಯ್ದದ್ದೇಕೆ? ನಿನ್ನ ಕಣ್ಣುಗಳು ನಮ್ಮ ಮೇಲೆ ಕಿಡಿಕಿಡಿಯಾಗುವುದೇಕೆ? |
13
|
ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ! |
14
|
“ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ? |
15
|
ದೇವರು ತನ್ನ ದೂತರುಗಳನ್ನು ಸಹ ನಂಬುವುದಿಲ್ಲ. ಆತನ ದೃಷ್ಟಿಯಲ್ಲಿ ಆಕಾಶಗಳು ಸಹ ಅಶುದ್ಧವಾಗಿವೆ. |
16
|
ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ? |
17
|
“ಯೋಬನೇ, ನನಗೆ ಕಿವಿಗೊಡು, ಆಗ ನಾನು ನಿನಗೆ ಅದನ್ನು ವಿವರಿಸುವೆನು. ನಾನು ನೋಡಿರುವುದನ್ನೇ ನಿನಗೆ ತಿಳಿಸುವೆನು. |
18
|
ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ. |
19
|
ಅವರು ಮಾತ್ರ ತಮ್ಮ ದೇಶದಲ್ಲಿ ವಾಸಿಸಿದರು. ಅವರ ಮಧ್ಯದಲ್ಲಿ ಯಾವ ವಿದೇಶಿಯನೂ ಹಾದು ಹೋಗುತ್ತಿರಲಿಲ್ಲ. |
20
|
ದುಷ್ಟನು ತನ್ನ ಜೀವಮಾನವೆಲ್ಲಾ ಯಾತನೆಯನ್ನು ಅನುಭವಿಸುವನು. ಕ್ರೂರಿಯು ತನಗೆ ನೇಮಕಗೊಂಡಿರುವ ವರ್ಷಗಳಲ್ಲೆಲ್ಲಾ ಕಷ್ಟಪಡುವನು. |
21
|
ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣಮಾಡುವನು. |
22
|
ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ. |
23
|
ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ. |
24
|
ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣಮಾಡುತ್ತವೆ. |
25
|
ಯಾಕಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು. |
26
|
ಅವನು ಬಹು ಮೊಂಡನಾಗಿದ್ದಾನೆ. ದುಷ್ಟನು ಮಹಾಗುರಾಣಿಯನ್ನು ಹಿಡಿದು ದೇವರನ್ನು ಎದುರಿಸಲು ಪ್ರಯತ್ನಿಸುವನು. |
27
|
“ದುಷ್ಟನ ಮುಖದಲ್ಲಿ ಕೊಬ್ಬೇರಿದೆ. ಅವನ ಸೊಂಟದಲ್ಲಿ ಬೊಜ್ಜು ಬೆಳೆದುಕೊಂಡಿದೆ. |
28
|
ಪಾಳುಬಿದ್ದಿರುವ ಮನೆಗಳಲ್ಲಿ ದುಷ್ಟನು ವಾಸಿಸುವನು ಹಾಳುದಿಬ್ಬಗಳಾಗಬೇಕೆಂಬುದೇ ಆ ಮನೆಗಳ ಗತಿಯಾಗಿದೆ. |
29
|
ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ. |
30
|
ದುಷ್ಟನು ಕತ್ತಲೆಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಬೆಂಕಿಯಿಂದ ಸುಟ್ಟುಹೋದ ಕೊಂಬೆಗಳನ್ನು ಹೊಂದಿರುವ ಮರದಂತೆ ಅವನಿರುವನು. ದೇವರ ಉಸಿರು ದುಷ್ಟನನ್ನು ಬಡಿದುಕೊಂಡು ಹೋಗುವುದು. |
31
|
ದುಷ್ಟನು ಅಯೋಗ್ಯವಾದವುಗಳ ಮೇಲೆ ನಂಬಿಕೆಯಿಟ್ಟು, ತನ್ನನ್ನು ತಾನೇ ಮೋಸಮಾಡಿಕೊಳ್ಳದಿರಲಿ. ಯಾಕಂದರೆ ಅದಕ್ಕೆ ಪ್ರತಿಫಲವಾಗಿ ಅವನಿಗೇನೂ ದೊರೆಯುವುದಿಲ್ಲ. |
32
|
ದುಷ್ಟನು ತನ್ನ ಜೀವಿತ ಮುಗಿಯುವುದಕ್ಕಿಂತ ಮೊದಲೇ ಮುದುಕನಾಗುವನು; ಒಣಗಿಹೋಗಿ ಇನ್ನೆಂದಿಗೂ ಹಸುರಾಗದ ಬಳ್ಳಿಯಂತಾಗುವನು; |
33
|
ಮಾಗುವುದಕ್ಕಿಂತ ಮೊದಲೇ ತನ್ನ ದ್ರಾಕ್ಷಿಯನ್ನು ಕಳೆದುಕೊಳ್ಳುವ ದ್ರಾಕ್ಷಿ ಬಳ್ಳಿಯಂತಿರುವನು; ಹೂವುಗಳು ಉದುರಿ ಹೋದ ಆಲಿವ್ ಮರದಂತಿರುವನು. |
34
|
ಯಾಕಂದರೆ ದೇವರಿಲ್ಲದ ಜನರು ಫಲ ಕೊಡಲಾರರು. ಲಂಚಕೋರರ ಗುಡಾರಗಳು ಬೆಂಕಿಯಿಂದ ಸುಟ್ಟುಹೋಗುತ್ತವೆ. |
35
|
ಅವರು ಗರ್ಭಧರಿಸಿ ಕೆಡುಕನ್ನೇ ಹೆರುವರು. ಅವರ ಗರ್ಭದಲ್ಲಿರುವ ಮಗುವು ಮೋಸಕರವಾದದ್ದು.” |
Job 15:1 Kannada Language Bible Words basic statistical display
COMING SOON ...